ಹವಾಮಾನ ವರದಿ | 19-08-2024 | ಹಲವು ಕಡೆ ಸಂಜೆ ಸಾಮಾನ್ಯ ಮಳೆ | ಆ.20 ರಂದು ಉತ್ತರ ಕೇರಳ ಕರಾವಳಿಯಲ್ಲಿ ವಾಯುಭಾರ ಕುಸಿತ ಸಾಧ್ಯತೆ |

August 19, 2024
11:12 AM

20.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗಿನೊಂದಿಗೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಕಾಸರಗೋಡು ಹಾಗೂ ಕೇರಳ – ದಕ್ಷಿಣ ಕನ್ನಡ ಗಡಿ ಭಾಗಗಳಲ್ಲಿ ಸಂಜೆ, ರಾತ್ರಿ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.

ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಸ್ವಲ್ಪ ಕಡಿಮೆ ಇರಬಹುದು.

ಚಿತ್ರದುರ್ಗ ಉತ್ತರ, ಬಳ್ಳಾರಿ ದಕ್ಷಿಣ ಹಾಗೂ ದಾವಣಗೆರೆ ಪೂರ್ವ ಭಾಗಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಭಾರಿ ಮಳೆಯ ಮುನ್ಸೂಚೆನೆ ಇದೆ. ಉಳಿದ ಭಾಗಗಳಲ್ಲಿಯೂ ಗುಡುಗು ಸಹಿತ ಮಳೆಯಾಗಲಿದೆ. ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡು ಭಾಗಗಳ ಹೆಚ್ಚಿನ ಪ್ರದೇಶಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.

ಹಾವೇರಿ, ಧಾರವಾಡ, ಬೆಳಗಾವಿ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಈಗಿನಂತೆ ಆ. 20ರಂದು ಉತ್ತರ ಕೇರಳ ಕರಾವಳಿಯಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆ ಆರಂಭವಾಗುವ ಲಕ್ಷಣಗಳಿದ್ದು, ಇದರ ಪ್ರಭಾವದಿಂದ ಆ. 23ರ ತನಕ ಕರಾವಳಿ ಜಿಲ್ಲೆಗಳಾದ್ಯಂತ ಮಳೆಯ ಪ್ರಮಾಣ ಕಡಿಮೆ ಇರುವ ಸಾಧ್ಯತೆಗಳಿವೆ. ಈ ತಿರುಗುವಿಕೆಯು ಉತ್ತರಕ್ಕೆ ಚಲಿಸುವ ಸಾಧ್ಯತೆಗಳಿದ್ದು, ಆ. 24ರಿಂದ ಮುಂಗಾರು ಸ್ವಲ್ಪ ಚುರುಕಾಗುವ ಲಕ್ಷಣಗಳಿವೆ. ಈ ಸಂದರ್ಭದಲ್ಲಿ ಅರಬ್ಬಿ ಸಮುದ್ರದ ಮುಂಗಾರು ಮಾರುತಗಳು ಶ್ರೀಲಂಕಾ ಮೂಲಕ ಬಂಗಾಳಕೊಲ್ಲಿಗೆ ಸೇರುತ್ತಿರುವುದು ಕಡಿಮೆಯಾಗಲಿರುವುದರಿಂದ ರಾಜ್ಯದ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು
March 13, 2026
6:58 AM
by: ಮಿರರ್‌ ಡೆಸ್ಕ್
ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ | ದೆಹಲಿಯಲ್ಲಿ GCWAS-2026 ಆರಂಭ
March 13, 2026
6:48 AM
by: ಮಿರರ್‌ ಡೆಸ್ಕ್
ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ
March 12, 2026
9:26 PM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತ ಗಂಭೀರತೆ : ಲೋಕಸಭೆಯಲ್ಲಿ ಧ್ವನಿಯೆತ್ತಿದ ಸಂಸದ
March 12, 2026
9:11 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror