ಹವಾಮಾನ ವರದಿ |20.08.2024 | ರಾಜ್ಯದ ಹಲವೆಡೆ ಇಂದು ಸಂಜೆ ಗುಡುಗು ಸಹಿತ ಮಳೆ ಸಾಧ್ಯತೆ

August 20, 2024
11:53 AM

21.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗಿನೊಂದಿಗೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಚಾಮರಾಜನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಬಳ್ಳಾರಿ, ದಾವಣಗೆರೆ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ, ರಾಯಚೂರು, ವಿಜಾಪುರ, ಕಲಬುರ್ಗಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.

ಮೈಸೂರು, ಮಂಡ್ಯ, ತುಮಕೂರು( ಪಾವಗಢ ಉತ್ತಮ ಇರಬಹುದು), ಹಾವೇರಿ, ಯಾದಗಿರಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಮಹಾರಾಷ್ಟ್ರ – ಕರ್ನಾಟಕ ಗಡಿ ಭಾಗಗಳ ಸುತ್ತಮುತ್ತ ಮಳೆ ಕಡಿಮೆ ಇರಬಹುದು.

ಈಗಿನಂತೆ ಆ.23ರಿಂದ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ತಿರುಗುವಿಕೆಯು ಒಮ್ಮೆಗೆ ಶಿಥಿಲಗೊಂಡರೂ ಆ. 25ರ ಸುಮಾರಿಗೆ ಮಹಾರಾಷ್ಟ್ರ ಕರಾವಳಿಯಲ್ಲಿ ಮತ್ತೆ ತಿರುಗುವಿಕೆ ಉಂಟಾಗುವ ಸಾಧ್ಯತೆಗಳಿದ್ದು, ಇದರಿಂದ ಮುಂಗಾರು ಚುರುಕಾಗುವ ಲಕ್ಷಣಗಳಿವೆ. ರಾಜ್ಯದ ಒಳನಾಡು ಭಾಗಗಳಲ್ಲಿ ಮಳೆ ಕ್ಷೀಣಿಸಿ ಕರಾವಳಿ ಭಾಗಗಳಲ್ಲಿ ಆ. 30ರ ತನಕವೂ ಮಳೆ ಮುಂದುವರಿಯುವ ಮುನ್ಸೂಚೆನೆ ಇದೆ. (ಆ.24ರಿಂದ ಕರಾವಳಿಯಲ್ಲಿ ಅಡಿಕೆ ತೋಟಗಳಿಗೆ ಔಷಧಿ ಸಿಂಪಡಿಸಲು ಅವಕಾಶ ಕಡಿಮೆಯಾಗಬಹುದು).

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ರಿಲಯನ್ಸ್ ಫೌಂಡೇಶನ್ ಪದವಿ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
October 1, 2026
7:48 AM
by: ದ ರೂರಲ್ ಮಿರರ್.ಕಾಂ
ರೈತನ ಹೊಲದಿಂದ ನಿಮ್ಮ ತಟ್ಟೆಯವರೆಗೆ… AI ಬರಲಿದೆ..!
October 1, 2026
7:40 AM
by: ದ ರೂರಲ್ ಮಿರರ್.ಕಾಂ
ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಚಿನ್ನದ ಬೇಟೆ – ಒಂದೇ ದಿನ 4 ಚಿನ್ನ; ಪದಕಗಳ ಸಂಖ್ಯೆ 60ಕ್ಕೆ ಏರಿಕೆ
September 30, 2026
10:51 PM
by: ದ ರೂರಲ್ ಮಿರರ್.ಕಾಂ
ಅಡಿಕೆ ವಹಿವಾಟಿನ ಮೇಲೆ ಹೆಚ್ಚಿದ ಕಣ್ಗಾವಲು..!, ಗಮನ ಸೆಳೆದ ಪ್ರತ್ಯೇಕ ಮೂರು ಘಟನೆಗಳು
September 30, 2026
9:10 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror