21.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗಿನೊಂದಿಗೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಚಾಮರಾಜನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಬಳ್ಳಾರಿ, ದಾವಣಗೆರೆ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ, ರಾಯಚೂರು, ವಿಜಾಪುರ, ಕಲಬುರ್ಗಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಮಂಡ್ಯ, ತುಮಕೂರು( ಪಾವಗಢ ಉತ್ತಮ ಇರಬಹುದು), ಹಾವೇರಿ, ಯಾದಗಿರಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಮಹಾರಾಷ್ಟ್ರ – ಕರ್ನಾಟಕ ಗಡಿ ಭಾಗಗಳ ಸುತ್ತಮುತ್ತ ಮಳೆ ಕಡಿಮೆ ಇರಬಹುದು.ಈಗಿನಂತೆ ಆ.23ರಿಂದ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ತಿರುಗುವಿಕೆಯು ಒಮ್ಮೆಗೆ ಶಿಥಿಲಗೊಂಡರೂ ಆ. 25ರ ಸುಮಾರಿಗೆ ಮಹಾರಾಷ್ಟ್ರ ಕರಾವಳಿಯಲ್ಲಿ ಮತ್ತೆ ತಿರುಗುವಿಕೆ ಉಂಟಾಗುವ ಸಾಧ್ಯತೆಗಳಿದ್ದು, ಇದರಿಂದ ಮುಂಗಾರು ಚುರುಕಾಗುವ ಲಕ್ಷಣಗಳಿವೆ. ರಾಜ್ಯದ ಒಳನಾಡು ಭಾಗಗಳಲ್ಲಿ ಮಳೆ ಕ್ಷೀಣಿಸಿ ಕರಾವಳಿ ಭಾಗಗಳಲ್ಲಿ ಆ. 30ರ ತನಕವೂ ಮಳೆ ಮುಂದುವರಿಯುವ ಮುನ್ಸೂಚೆನೆ ಇದೆ. (ಆ.24ರಿಂದ ಕರಾವಳಿಯಲ್ಲಿ ಅಡಿಕೆ ತೋಟಗಳಿಗೆ ಔಷಧಿ ಸಿಂಪಡಿಸಲು ಅವಕಾಶ ಕಡಿಮೆಯಾಗಬಹುದು).
ಪದವಿ ಮೊದಲ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ ರಿಲಯನ್ಸ್ ಫೌಂಡೇಶನ್ ವಿದ್ಯಾರ್ಥಿವೇತನಕ್ಕೆ…
ಕರ್ನಾಟಕದಲ್ಲಿ ಬೀಜದಿಂದ ಗ್ರಾಹಕರ ತಟ್ಟೆಯವರೆಗೆ ಕೃಷಿ ಉತ್ಪನ್ನದ ಪಯಣವನ್ನು ಪತ್ತೆಹಚ್ಚಲು AI ಆಧಾರಿತ…
ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಒಂದೇ ದಿನ 4 ಚಿನ್ನ ಸೇರಿದಂತೆ 7 ಪದಕ…
ಅಸ್ಸಾಂನಲ್ಲಿ 5.74 ಟನ್ ಅಡಿಕೆ ವಶ, ಕೇರಳದಲ್ಲಿ 380 ಚೀಲ ಅಡಿಕೆ ಬಿಡುಗಡೆಗೆ…
ರಬಿ(ಹಿಂಗಾರು) ಬೆಳೆಗಳಿಗೆ ಕೇಂದ್ರ ಸರ್ಕಾರ MSP ಹೆಚ್ಚಿಸಿದೆ. ಗೋಧಿ MSP ₹2,610ಕ್ಕೆ, ಕಡಲೆ…
ಅಕ್ಟೋಬರ್ 1ರಿಂದ ಅರಬ್ಬಿ ಸಮುದ್ರದ ಗಾಳಿ ದುರ್ಬಲಗೊಳ್ಳುವ ಸಾಧ್ಯತೆ ಇರುವುದರಿಂದ ಕರ್ನಾಟಕದಲ್ಲಿ ಮಳೆಯ…