ಹವಾಮಾನ ವರದಿ | 21.08.2024 | ರಾಜ್ಯದ ಕೆಲವೆಡೆ ಸಾಮಾನ್ಯ ಮಳೆ ಸಾಧ್ಯತೆ

August 21, 2024
12:11 PM

22.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಕೊಡಗು ಹಾಗೂ ಹಾಸನ ಮೋಡದ ವಾತಾವರಣದೊಂದಿಗೆ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಮೈಸೂರು, ಮಂಡ್ಯ, ಮೋಡ ಅಥವಾ ಅಲ್ಲಲ್ಲಿ ತುಂತುರು, ಚಾಮರಾಜನಗರ( ಕೊಳ್ಳೇಗಾಲ ಸುತ್ತಮುತ್ತ ) ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಮಳೆಯ ಮುನ್ಸೂಚನೆ ಇದೆ.

ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಬಳ್ಳಾರಿ, ಕೊಪ್ಪಳ, ವಿಜಯಪುರ, ಕಲಬುರ್ಗಿ, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕೆಲವು ಭಾಗಗಳಲ್ಲಿ ಭಾರಿ ಮಳೆಯ ಸಾಧ್ಯತೆಯೂ ಇದೆ. ರಾಯಚೂರು ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ.

ಈಗಿನಂತೆ ಆ.22ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಅರಬ್ಬಿ ಸಮುದ್ರದ ರಾಜ್ಯದ ಕರಾವಳಿ ಭಾಗದಲ್ಲಿ ಉಂಟಾಗಿರುವ ತಿರುವಿಕೆಯ ಪ್ರಭಾವದಿಂದ ಮುಂಗಾರು ಮಾರುತಗಳು ಚುರುಕಾಗುವ ಲಕ್ಷಣಗಳಿವೆ. ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆ ಮುಂದುವರಿಯಲಿದ್ದು. ಆ. 24ರಿಂದ ಮಲೆನಾಡು ಭಾಗಗಳಲ್ಲಿಯೂ ಮಳೆ ಮುಂದುವರಿಯುವ ಮುನ್ಸೂಚನೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!
April 5, 2026
1:27 PM
by: ಸಾಯಿಶೇಖರ್ ಕರಿಕಳ
ದೇಶಾದ್ಯಂತ 9.25 ಕೋಟಿ ರೈತ ಐಡಿ ನಿರ್ಮಾಣ | ರಸಗೊಬ್ಬರ ಬ್ಲಾಕ್‌ ಮಾರ್ಕೆಟ್‌ ವಿರುದ್ಧ ಕಟ್ಟುನಿಟ್ಟಾಗಿ ಕ್ರಮಕ್ಕೆ ಕೇಂದ್ರ ಕೃಷಿ ಸಚಿವರ ಸೂಚನೆ
April 4, 2026
7:34 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror