22.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಕೊಡಗು ಹಾಗೂ ಹಾಸನ ಮೋಡದ ವಾತಾವರಣದೊಂದಿಗೆ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಮಂಡ್ಯ, ಮೋಡ ಅಥವಾ ಅಲ್ಲಲ್ಲಿ ತುಂತುರು, ಚಾಮರಾಜನಗರ( ಕೊಳ್ಳೇಗಾಲ ಸುತ್ತಮುತ್ತ ) ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಆ.22ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಅರಬ್ಬಿ ಸಮುದ್ರದ ರಾಜ್ಯದ ಕರಾವಳಿ ಭಾಗದಲ್ಲಿ ಉಂಟಾಗಿರುವ ತಿರುವಿಕೆಯ ಪ್ರಭಾವದಿಂದ ಮುಂಗಾರು ಮಾರುತಗಳು ಚುರುಕಾಗುವ ಲಕ್ಷಣಗಳಿವೆ. ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆ ಮುಂದುವರಿಯಲಿದ್ದು. ಆ. 24ರಿಂದ ಮಲೆನಾಡು ಭಾಗಗಳಲ್ಲಿಯೂ ಮಳೆ ಮುಂದುವರಿಯುವ ಮುನ್ಸೂಚನೆ ಇದೆ.
ಸೆ.28ರಿಂದ 30ರವರೆಗೆ ನಡೆಯಬೇಕಿದ್ದ ರಾಷ್ಟ್ರವ್ಯಾಪಿ ಮೂರು ದಿನಗಳ ಬ್ಯಾಂಕ್ ಮುಷ್ಕರವನ್ನು ಕೊನೆ ಕ್ಷಣದಲ್ಲಿ…
‘ಅನ್ನಂ ಬ್ರಹ್ಮ’ ಚಾತುರ್ಮಾಸ್ಯದ ಉದ್ದೇಶ ಖ್ಯಾತಿ ಅಥವಾ ಪ್ರಚಾರವಲ್ಲ, ಸಮಾಜ ಪರಿವರ್ತನೆ ಎಂದು…
ಮೇಘಾಲಯ ಅಡಿಕೆಗೆ ಜಿಐ ಟ್ಯಾಗ್ ಪಡೆಯಲು ಅರ್ಜಿ ಸಲ್ಲಿಸಿರುವ ಬೆಳವಣಿಗೆ ಅಡಿಕೆಯ ಭೌಗೋಳಿಕ…
ಕರ್ನಾಟಕದಾದ್ಯಂತ ಸೆ.28ರಂದು ಒಣಹವೆ ಆವರಿಸುವ ಸಾಧ್ಯತೆ ಇದ್ದರೂ ಕೊಡಗು ಹಾಗೂ ಚಿಕ್ಕಮಗಳೂರಿನ ಕೆಲವು…
ಬಯಲುಸೀಮೆಯಲ್ಲಿ ಅಡಿಕೆ ಬೆಳೆ ವಿಸ್ತರಣೆಗೆ ನೀರಾವರಿ, ಕಡಿಮೆ ನಿರ್ವಹಣಾ ವೆಚ್ಚ ಮತ್ತು ಉತ್ತಮ…