23.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ, ಉತ್ತರ ಕನ್ನಡ ಕರಾವಳಿ ತೀರ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. (ಮುಂಗಾರು ರೀತಿಯ ಮಳೆ, ಗುಡುಗು ಸಾಧ್ಯತೆ ಕಡಿಮೆ ಇರಬಹುದು).
ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡದ ವಾತಾವರಣದೊಂದಿಗೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಚಾಮರಾಜನಗರದ ಕೊಳ್ಳೇಗಾಲ ಸುತ್ತಮುತ್ತ, ಬೆಂಗಳೂರು ಉತ್ತರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ, ಬಳ್ಳಾರಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೀದರ್ ಹಾಗೂ ಕಲಬುರ್ಗಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ರಾಜ್ಯದ ಉಳಿದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.
ಈಗಿನಂತೆ ಅರಬ್ಬಿ ಸಮುದ್ರದ ಗಾಳಿಯ ತಿರುಗುವಿಕೆಯು ಉತ್ತರಕ್ಕೆ ಚಲಿಸುತ್ತಿದ್ದು, ಲಯ ತಪ್ಪಿದ ಮುಂಗಾರು ಮಾರುತಗಳನ್ನು ಸರಿಯಾದ ದಿಕ್ಕಿಗೆ ಚಲಿಸುವಂತೆ ಮಾಡುತ್ತಿದೆ. ಇದರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಆಗಸ್ಟ್ 24ರಿಂದ ಕರಾವಳಿಯಲ್ಲಿ ಹಾಗೂ ಮಲೆನಾಡು ಭಾಗಗಳಲ್ಲಿ ಮುಂಗಾರು ಸ್ವಲ್ಪ ಚುರುಕಾಗುವ ಲಕ್ಷಣಗಳಿವೆ. ಒಳನಾಡು ಭಾಗಗಳ ಒಂದೆರಡು ಕಡೆ ಮಳೆಯ ಸಾಧ್ಯತೆ ಇದೆ.
ಹವಾಮಾನ ವರದಿ | 22.08.2024 |
ರಾಜ್ಯದ ಹಲವೆಡೆ ಸಾಮಾನ್ಯ ಮಳೆ ಸಾಧ್ಯತೆ
Advertisement— theruralmirror (@ruralmirror) August 22, 2024
Advertisement