24.08.2024 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ, ರಾತ್ರಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಗುಡುಗು ಸಾಧ್ಯತೆ ಕಡಿಮೆ.
ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬೆಳಿಗ್ಗೆ ಬಿಸಿಲು ಇದ್ದರೆ, ನಂತರ ಮೋಡದ ವಾತಾವರಣ ಇರಲಿದ್ದು ಸಂಜೆ, ರಾತ್ರಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ ಬೆಂಗಳೂರು ನಗರ ಹಾಗೂ ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಇರಲಿದ್ದು ಬೆಂಗಳೂರು ಉತ್ತರ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ.
ಉತ್ತರ ಒಳನಾಡಿನ ರಾಯಚೂರು, ಯಾದಗಿರಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಗದಗ ಜಿಲ್ಲೆಯ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಅರಬ್ಬಿ ಸಮುದ್ರದ ಗಾಳಿಯ ತಿರುಗುವಿಕೆಯ ಪ್ರಭಾವದಿಂದ ಮುಂಗಾರು ಚುರುಕಾಗಲಿದ್ದು ಆ. 24ರಿಂದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಮಳೆ ಮತ್ತೆ ಆರಂಭವಾಗುವ ಮುನ್ಸೂಚನೆ ಇದೆ. ಈ ವಾತಾವರಣವು ಆಗಸ್ಟ್ ಕೊನೆಯ ತನಕವೂ ಮುಂದುವರಿಯುವ ಸಾಧ್ಯತೆಗಳಿವೆ. ಉತ್ತರ ಒಳನಾಡು ಭಾಗಗಳ ಒಂದೆರಡು ಕಡೆ ಮಳೆಯ ಸಾಧ್ಯತೆಯೂ ಇದೆ.
22.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
“ಮನೆಯೇ ಮೊದಲ ಪಾಠಶಾಲೆ, ಜನನಿ ತಾನೆ ಮೊದಲ ಗುರುವು ಜನನಿಯಿಂದ ಪಾಠ ಕಲಿತ…
ಕೃಷಿ ಇಲಾಖೆಯಿಂದ ರಾಜ್ಯ ಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ…
21.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ ಸೇರಿದಂತೆ…
ಬೆಂಗಳೂರು ತಂತ್ರಜ್ಞಾನ ಮತ್ತು ಕೈಗಾರಿಕಾ ಪ್ರಗತಿಯ ಸಂಕೇತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. …
ನಬಾರ್ಡ್ ನಿಂದ ರಾಜ್ಯಕ್ಕೆ ನೀಡಲಾಗುವ ಸಾಲದ ಮೊತ್ತವನ್ನು 5600 ಕೋಟಿ ರೂಪಾಯಿಗಳಿಂದ, ಈ…