25.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆ ಸ್ವಲ್ಪ ಜಾಸ್ತಿ ಇರಬಹುದು. ಕರಾವಳಿ ತೀರ ಭಾಗಗಳಲ್ಲಿ ಜಾಸ್ತಿಯೇ ಇರಬಹುದು.
ಕೊಡಗು, ಹಾಸನ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.
ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆ, ದಾವಣಗೆರೆ ಉತ್ತರ, ಬಳ್ಳಾರಿ, ಕೊಪ್ಪಳ, ವಿಜಯಪುರ, ರಾಯಚೂರು, ಯಾದಗಿರಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಉತ್ತರ ಭಾರತದ ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶ ಗಡಿ ಭಾಗದಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿದ್ದು, ಇದರಿಂದ ಮಹಾರಾಷ್ಟ್ರ, ಮಧ್ಯಪ್ರದೇಶ, ಛತ್ತೀಸಗಡ, ಉತ್ತರ ಪ್ರದೇಶ ರಾಜ್ಯಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಈ ತಿರುಗುವಿಕೆಯು ಪೂರ್ವಕ್ಕೆ ಚಲಿಸಿ ಆ. 26ರಂದು ಗುಜರಾತ್ ಮೂಲಕ ಅರಬ್ಬಿ ಸಮುದ್ರ ಸೇರುವ ಲಕ್ಷಣಗಳಿವೆ.
ಮುಂಗಾರು ಸ್ವಲ್ಪ ಚುರುಕಾಗಿದ್ದು ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ ಕೊನೇಯವರೆಗೂ ಮಳೆ ಮುಂದುವರಿಯುವ ಲಕ್ಷಣಗಳಿವೆ.