ಹವಾಮಾನ ವರದಿ | 28.08.2024 | ರಾಜ್ಯದ ಕೆಲವೆಡೆ ಉತ್ತಮ ಮಳೆ | ಕೆಲವೆಡೆ ತುಂತುರು ಮಳೆ

August 28, 2024
12:29 PM

29.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.

ಕೊಡಗು ತುಂತುರು ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ ಹಾಸನ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, ಉಳಿದ ಭಾಗಗಳಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.

ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಮೈಸೂರು, ಮಂಡ್ಯ, ಚಾಮರಾಜನಗರ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಈಗಿನಂತೆ ಗುಜರಾತ್ ವಾಯುಭಾರ ಕುಸಿತದ ಪ್ರಭಾವ ಕಡಿಮೆಯಾಗುತ್ತಲಿದ್ದು, ಆ. 31ರಿಂದ ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿನ ಈಗಿನ ಮಳೆಯೂ ಕಡಿಮೆಯಾಗುವ ಲಕ್ಷಣಗಳಿದ್ದರೂ, ಕರಾವಳಿಯಲ್ಲಿ ದಿನದಲ್ಲಿ ಒಂದೆರಡು ಸಾಮಾನ್ಯ ಮಳೆ ಮುಂದುವರಿಯುವ ಸಾಧ್ಯತೆಗಳಿವೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುನಿಮ್ನತೆಯ ಪರಿಣಾಮವನ್ನು ಕಾದು ನೋಡಬೇಕಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ
September 15, 2026
11:12 PM
by: ದ ರೂರಲ್ ಮಿರರ್.ಕಾಂ
ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ
September 15, 2026
10:09 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ
September 15, 2026
12:30 PM
by: ಸಾಯಿಶೇಖರ್ ಕರಿಕಳ
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್‌ಗೆ ಮಂಗಳೂರಿನಲ್ಲಿ ಅಭಿನಂದನೆ – ಪುಟ್ಟ ಕಲಾವಿದನ ಸಾಧನೆಯ ಹಿಂದಿನ ಪಯಣಕ್ಕೆ ಮೆಚ್ಚುಗೆ
September 14, 2026
2:55 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror