30.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಜಿಲ್ಲೆಯಲ್ಲಿ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚೆನೆ ಇದ್ದರೆ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ. ಸಣ್ಣ ಪ್ರಮಾಣದ ಗುಡುಗು ಸಾಧ್ಯತೆಯೂ ಇದೆ. ಉತ್ತರ ಕನ್ನಡ ಕರಾವಳಿ ತೀರ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದು, ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಕೊಡಗು ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ ಜಿಲ್ಲೆಯ ಅಲ್ಲಲ್ಲಿ ತುಂತುರು ಹಾಗೂ ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.
ಮೈಸೂರು ಉತ್ತರ, ಚಾಮರಾಜನಗರ (ಕೊಳ್ಳೇಗಾಲ), ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ – ಹಾವೇರಿ ಗಡಿಭಾಗಗಳ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಉಳಿದ ದಾವಣಗೆರೆ, ಹಾವೇರಿ ಹಾಗೂ, ಧಾರವಾಡ, ಬೆಳಗಾವಿ, ಚಿತ್ರದುರ್ಗ, ಬೀದರ್ ಜಿಲ್ಲೆಗಳಲ್ಲಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಗುಜರಾತ್ ವಾಯುಭಾರ ಕುಸಿತವು ಆ. 30ರಂದು ಅರಬ್ಬಿ ಸಮುದ್ರಕ್ಕೆ ಪ್ರವೇಶಿಸಿ ಪಾಕಿಸ್ತಾನದ ಕರಾವಳಿ ಮೂಲಕ ಸಾಗಿ ಆ. 31ರಂದು ಮಸ್ಕತ್ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ. ಇದೇ ಸಂದರ್ಭದಲ್ಲಿ ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ತಿರುಗುವಿಕೆ ಉಂಟಾಗಿದ್ದು, ವಾಯುಭಾರ ಕುಸಿತವಾಗುವ ಲಕ್ಷಣಗಳಿಲ್ಲದಿದ್ದರೂ ಪರಿಸ್ಥಿತಿ ಕಾದು ನೋಡಬೇಕಾಗಿದೆ.
ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…
ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್…
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…