31.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಸ್ವಲ್ಪ ಕಡಿಮೆ ಇರಬಹುದು.
ಕೊಡಗು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ ಮತ್ತು ಶಿವಮೊಗ್ಗ ಪೂರ್ವ ಭಾಗಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.
ಪಾವಗಡ, ಬಳ್ಳಾರಿ – ಆಂದ್ರಾ ಗಡಿಭಾಗಗಳಲ್ಲಿ, ರಾಯಚೂರು, ಯಾದಗಿರಿ, ಬೀದರ್ ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಉಳಿದ ಬಳ್ಳಾರಿ, ಕೊಪ್ಪಳ, ವಿಜಯಪುರ, ಕಲಬುರ್ಗಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಗುಜರಾತ್ ವಾಯುಭಾರ ಕುಸಿತವು ಇಂದು ರಾತ್ರಿ ಅರಬ್ಬಿ ಸಮುದ್ರ ಪ್ರವೇಶಿಸಿ ಸೆ.2ರಂದು ಮಸ್ಕತ್ ಕರಾವಳಿಗೆ ಅಪ್ಪಳಿಸುವ ಲಕ್ಷಣಗಳಿವೆ. ಇದರಿಂದ ಮುಂಗಾರು ಮಾರುತಗಳು ಉತ್ತರಕ್ಕೆ ಸೆಳೆಯಲ್ಪಡುವುದರಿಂದ ರಾಜ್ಯದಲ್ಲಿ ಆ. 31 ಹಾಗೂ ಸೆ.1ರಂದು ಮಳೆ ಕಡಿಮೆಯಾಗಲಿದ್ದು, ಸೆ. 2ರಿಂದ ಕರಾವಳಿ ಭಾಗಗಳಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಇದೇ ಸಮಯದಲ್ಲಿ ಬಂಗಾಳಕೊಲ್ಲಿಯ ತಿರುಗುವಿಕೆಯೂ ಶಿಥಿಲಗೊಂಡರೆ ಮಾತ್ರ ರಾಜ್ಯದ ಕರಾವಳಿಯಲ್ಲೂ ಮಳೆಯ ಪ್ರಮಾಣ ಕಡಿಮೆಯಾಗಬಹುದು. ಪರಿಸ್ಥಿತಿ ಕಾದುನೋಡಬೇಕಾಗಿದೆ. ಸೆ. 2ರಂದು ಸ್ಪಷ್ಟತೆ ಸಿಗಬಹುದು.ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…