Advertisement
ವೆದರ್ ಮಿರರ್

ಹವಾಮಾನ ವರದಿ | 30.08.2024 | ರಾಜ್ಯದೆಲ್ಲೆಡೆ ಉತ್ತಮ ಮಳೆ ಸಾಧ್ಯತೆ

Share

31.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಸ್ವಲ್ಪ ಕಡಿಮೆ ಇರಬಹುದು.

ಕೊಡಗು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ ಮತ್ತು ಶಿವಮೊಗ್ಗ ಪೂರ್ವ ಭಾಗಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.

ಪಾವಗಡ, ಬಳ್ಳಾರಿ – ಆಂದ್ರಾ ಗಡಿಭಾಗಗಳಲ್ಲಿ, ರಾಯಚೂರು, ಯಾದಗಿರಿ, ಬೀದರ್ ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಉಳಿದ ಬಳ್ಳಾರಿ, ಕೊಪ್ಪಳ, ವಿಜಯಪುರ, ಕಲಬುರ್ಗಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.

ಮೈಸೂರು, ಮಂಡ್ಯ, ಚಾಮರಾಜನಗರ (ಕೊಳ್ಳೇಗಾಲ ಸುತ್ತಮುತ್ತ), ದಾವಣಗೆರೆ, ಹಾವೇರಿ, ಧಾರವಾಡ, ಗದಗ, ಬಾಗಲಕೋಟೆ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಬೆಳಗಾವಿ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ.

ಈಗಿನಂತೆ ಗುಜರಾತ್ ವಾಯುಭಾರ ಕುಸಿತವು ಇಂದು ರಾತ್ರಿ ಅರಬ್ಬಿ ಸಮುದ್ರ ಪ್ರವೇಶಿಸಿ ಸೆ.2ರಂದು ಮಸ್ಕತ್ ಕರಾವಳಿಗೆ ಅಪ್ಪಳಿಸುವ ಲಕ್ಷಣಗಳಿವೆ. ಇದರಿಂದ ಮುಂಗಾರು ಮಾರುತಗಳು ಉತ್ತರಕ್ಕೆ ಸೆಳೆಯಲ್ಪಡುವುದರಿಂದ ರಾಜ್ಯದಲ್ಲಿ ಆ. 31 ಹಾಗೂ ಸೆ.1ರಂದು ಮಳೆ ಕಡಿಮೆಯಾಗಲಿದ್ದು, ಸೆ. 2ರಿಂದ ಕರಾವಳಿ ಭಾಗಗಳಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಇದೇ ಸಮಯದಲ್ಲಿ ಬಂಗಾಳಕೊಲ್ಲಿಯ ತಿರುಗುವಿಕೆಯೂ ಶಿಥಿಲಗೊಂಡರೆ ಮಾತ್ರ ರಾಜ್ಯದ ಕರಾವಳಿಯಲ್ಲೂ ಮಳೆಯ ಪ್ರಮಾಣ ಕಡಿಮೆಯಾಗಬಹುದು. ಪರಿಸ್ಥಿತಿ ಕಾದುನೋಡಬೇಕಾಗಿದೆ. ಸೆ. 2ರಂದು ಸ್ಪಷ್ಟತೆ ಸಿಗಬಹುದು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ ಮನೆಮಾಡಿದ್ದು, ಶೃಂಗೇರಿ, ಹೊರನಾಡು, ಕಟೀಲು ಮತ್ತು ಕೊಲ್ಲೂರು ಸೇರಿದಂತೆ…

2 hours ago

ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಧರಣಿಯಲ್ಲಿ ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಯನ್ನು…

2 hours ago

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ

ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…

22 hours ago

ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ

ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…

22 hours ago

ಡಿಸೆಂಬರ್‌ನಲ್ಲಿ ಮತ್ತಷ್ಟು ತೀವ್ರಗೊಳ್ಳಲಿದೆಯೇ ಎಲ್‌ನಿನೋ..? ಬರ, ಪ್ರವಾಹದ ಅಪಾಯದ ಬಗ್ಗೆ ವಿಶ್ವ ಹವಾಮಾನ ಸಂಸ್ಥೆ ಎಚ್ಚರಿಕೆ

ಎಲ್‌ನಿನೋ ವಿದ್ಯಮಾನವು ಡಿಸೆಂಬರ್‌ನಲ್ಲಿ ಗರಿಷ್ಠ ತೀವ್ರತೆ ತಲುಪುವ ಸಾಧ್ಯತೆಯಿದ್ದು, 2027ರ ಫೆಬ್ರವರಿವರೆಗೆ ಮುಂದುವರಿಯಬಹುದು…

22 hours ago