01.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ:
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಗುಡುಗು ಸ್ವಲ್ಪ ಜಾಸ್ತಿ ಇರಬಹುದು. ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಯಾದಗಿರಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. ಚಿತ್ರದುರ್ಗ, ಬಳ್ಳಾರಿ, ದಾವಣಗೆರೆ, ಕೊಪ್ಪಳ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ) ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.
ಈಗಿನಂತೆ ಅರಬ್ಬಿ ಸಮುದ್ರದ ಗುಜರಾತ್ ಕರಾವಳಿ ಸಮೀಪದ ಚಂಡಮಾರುತವು ಸೆ.2 ರಂದು ಮಸ್ಕತ್ ಕರಾವಳಿಗೆ ಅಪ್ಪಳಿಸುವ ಲಕ್ಷಣಗಳಿವೆ. ಇದರಿಂದ ಮುಂಗಾರು ಮಾರುತಗಳು ಉತ್ತರಕ್ಕೆ ಸೆಳೆಯಲ್ಪಡುವುದರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಇವತ್ತು ವಿಶಾಖಪಟ್ಟಣದ ಸಮೀಪ ಭೂಮಿಗೆ ಪ್ರವೇಶಿಸುವ ಲಕ್ಷಣಗಳಿರುವುದರಿಂದ ಉತ್ತರ ಒಳನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಸೆ. 2ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.