04.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಗಾಳಿಯ ಚಲನೆ ಆಗ್ನೇಯ ಕಡೆಗೆ ಹೆಚ್ಚಿರುವುದರಿಂದ ಸುಬ್ರಮಣ್ಯ, ಸುಳ್ಯ ಸುತ್ತಮುತ್ತ ಭಾಗಗಳಲ್ಲಿ ಮಳೆಯ ತೀವ್ರತೆ ಸ್ವಲ್ಪ ಜಾಸ್ತಿ ಇರಬಹುದು.
ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡ ಬಿಸಿಲು ಹಾಗೂ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಳೆಯ ತೀವ್ರತೆ ಸ್ವಲ್ಪ ಜಾಸ್ತಿ ಇರಬಹುದು.
ಮೈಸೂರು, ಚಾಮರಾಜನಗರ, ಚಿತ್ರದುರ್ಗ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದ್ದರೆ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಹಾವೇರಿಯ ರಾಣೆಬೆನ್ನೂರು ಸುತ್ತಮುತ್ತ, ಯಾದಗಿರಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಸೆ. 4 ಅಥವಾ 5ರಿಂದ ಕರಾವಳಿ ಭಾಗದ ಉಡುಪಿ, ಉತ್ತರ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆ ಕಡಿಮೆಯಾಗುವ ಲಕ್ಷಣಗಳಿವೆ. ಆದರೆ ಸೆ. 8ರಿಂದ ಸಾಮಾನ್ಯ ಮಳೆಯ ಮುಂದುವರಿಯುವ ಸಾಧ್ಯತೆಗಳಿವೆ. ಉತ್ತರ ಕನ್ನಡ ಕರಾವಳಿ ಭಾಗಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ.
ರಾಜ್ಯದ ದಕ್ಷಿಣ ಹಾಗೂ ಉತ್ತರ ಒಳನಾಡಿನ ಹೆಚ್ಚಿನ ಭಾಗಗಳಲ್ಲಿ ಸೆ. 4ರಿಂದ ಮುಂದಿನ ದಿನ 10 ದಿನಗಳವರೆಗೂ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.