07.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಒಂದೆರಡು ಮಳೆ ಜಾಸ್ತಿ ಇರಬಹುದು.
ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ.
ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಯಾದಗಿರಿ, ಬೀದರ್ ಜಿಲ್ಲೆಗಳ ಒಂದೆರಡು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪ್ರಭಾವದಿಂದ ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿದೆ. ಈ ವಾಯುಭಾರ ಕುಸಿತವು ಶಿಥಿಲಗೊಳ್ಳುತ್ತಿದ್ದಂತೆ ಮಳೆಯ ಪ್ರಮಾಣವೂ ಕಡಿಮೆಯಾಗಲಿದೆ.
ಈಗಿನಂತೆ ಸೆ. 13ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ. ಅಲ್ಲಿಯ ತನಕ ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆ ಮುಂದುವರಿಯುವ ಸಾಧ್ಯತೆಗಳಿವೆ.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…