11.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಕರಾವಳಿ ತೀರ ಭಾಗಗಳಲ್ಲಿ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದ್ದು, ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನ ಸೆ. 13ರ ತನಕ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿದ್ದು, ನಂತರ ಕಡಿಮೆಯಾಗಲಿದೆ.
ಕೊಡಗಿನ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಹಾಸನ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ.
ಈಗಿನಂತೆ ಸೆ.14ರಿಂದ ಬಿಸಿಲಿನ ವಾತಾವರಣದ ಅವಧಿ ಹೆಚ್ಚಿರಬಹುದು.
ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ರಾಯಚೂರು, ಯಾದಗಿರಿ, ವಿಜಯಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ರಾಜ್ಯದ ಉಳಿದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಸೆ. 14ರಿಂದ ಬಿಸಿಲಿನ ವಾತಾವರಣದ ಅವಧಿ ಹೆಚ್ಚಿರಬಹುದು.
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಮಧ್ಯಪ್ರದೇಶ ತಲುಪಿದ್ದು, ಸೆ. 15ರ ಸುಮಾರಿಗೆ ಉತ್ತರ ಪ್ರದೇಶ ಹಾಗೂ ಉತ್ತರಾಖಂಡ ಕಡೆ ಸಾಗಿ ಶಿಥಿಲಗೊಳ್ಳುವ ಲಕ್ಷಣಗಳಿವೆ. ಇದರೊಂದಿಗೆ ರಾಜ್ಯದಲ್ಲಿ ಮಳೆ ಕ್ಷೀಣಿಸಲಿದ್ದು, ಬಿಸಿಲಿನ ವಾತಾವರಣದ ಹೆಚ್ಚಾಗುವ ನಿರೀಕ್ಷೆ ಇದೆ.