Advertisement
ವೆದರ್ ಮಿರರ್

ಹವಾಮಾನ ವರದಿ | 12.09.2024 | ರಾಜ್ಯದ ಹಲವೆಡೆ ಸಾಮಾನ್ಯ ಮಳೆ ಸಾಧ್ಯತೆ

Share

13.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಆಗಾಗ ಸ್ವಲ್ಪ ಮೋಡದ ವಾತಾವರಣದ ಸಾಧ್ಯತೆ ಇದ್ದು, ಅಲ್ಲಲ್ಲಿ ಒಂದೆರಡು ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.
ಈಗಿನಂತೆ ಸೆ.16ರ ವರೆಗೂ ಅಲ್ಲಲ್ಲಿ ದಿನದಲ್ಲಿ ಒಂದೆರಡು ಮಳೆಯ ಮುನ್ಸೂಚನೆ ಇದೆ. ಆದರೆ ಸೆ. 13ರಿಂದ ಬಿಸಿಲಿನ ಅವಧಿ ಸ್ವಲ್ಪ ಜಾಸ್ತಿ ಇರಬಹುದು.

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಒಂದೆರಡು ಮಳೆಯ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಹಾಗೂ ಹಾಸನ ಜಿಲ್ಲೆಯಲ್ಲಿ ಅಲ್ಲಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.

ಈಗಿನಂತೆ ಸೆ. 16ರ ತನಕವೂ ಬಿಸಿಲು, ಮೋಡ ಹಾಗೂ ಕರಾವಳಿ ಜಿಲ್ಲೆಗಳಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಒಂದೆರಡು ಮಳೆ ಮುಂದುವರಿಯುವ ಸಾಧ್ಯತೆಗಳಿವೆ. ಉಳಿದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣ ಇರಬಹುದು.

ಹೆಚ್ಚಿನ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಸ್ವಲ್ಪ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಸೆ. 14 ಹಾಗೂ 15ರಂದು ದಕ್ಷಿಣ ಒಳನಾಡು ಭಾಗಗಳಲ್ಲಿ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಉತ್ತರ ಪ್ರದೇಶದಲ್ಲಿಯ ವಾಯುಭಾರ ಕುಸಿತವು ಉತ್ತರಾಖಂಡಗೆ ಚಲಿಸಿ ಸೆ. 13 ರಂದು ಹಿಮಾಲಯ ಭಾಗದಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

12 hours ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

2 days ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

2 days ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

3 days ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

3 days ago