13.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಆಗಾಗ ಸ್ವಲ್ಪ ಮೋಡದ ವಾತಾವರಣದ ಸಾಧ್ಯತೆ ಇದ್ದು, ಅಲ್ಲಲ್ಲಿ ಒಂದೆರಡು ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.
ಈಗಿನಂತೆ ಸೆ.16ರ ವರೆಗೂ ಅಲ್ಲಲ್ಲಿ ದಿನದಲ್ಲಿ ಒಂದೆರಡು ಮಳೆಯ ಮುನ್ಸೂಚನೆ ಇದೆ. ಆದರೆ ಸೆ. 13ರಿಂದ ಬಿಸಿಲಿನ ಅವಧಿ ಸ್ವಲ್ಪ ಜಾಸ್ತಿ ಇರಬಹುದು.
ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಒಂದೆರಡು ಮಳೆಯ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಹಾಗೂ ಹಾಸನ ಜಿಲ್ಲೆಯಲ್ಲಿ ಅಲ್ಲಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಸೆ. 16ರ ತನಕವೂ ಬಿಸಿಲು, ಮೋಡ ಹಾಗೂ ಕರಾವಳಿ ಜಿಲ್ಲೆಗಳಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಒಂದೆರಡು ಮಳೆ ಮುಂದುವರಿಯುವ ಸಾಧ್ಯತೆಗಳಿವೆ. ಉಳಿದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣ ಇರಬಹುದು.ಹೆಚ್ಚಿನ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಸ್ವಲ್ಪ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಸೆ. 14 ಹಾಗೂ 15ರಂದು ದಕ್ಷಿಣ ಒಳನಾಡು ಭಾಗಗಳಲ್ಲಿ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಉತ್ತರ ಪ್ರದೇಶದಲ್ಲಿಯ ವಾಯುಭಾರ ಕುಸಿತವು ಉತ್ತರಾಖಂಡಗೆ ಚಲಿಸಿ ಸೆ. 13 ರಂದು ಹಿಮಾಲಯ ಭಾಗದಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ.
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…