ವೆದರ್‌ ಮಿರರ್‌ | 19.09.2024 | ರಾಜ್ಯದ ಹಲವೆಡೆ ಸಾಮಾನ್ಯ ಮಳೆ ಸಾಧ್ಯತೆ |

September 19, 2024
12:37 PM

20.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ, ಸುಬ್ರಮಣ್ಯ, ಸುಳ್ಯ ಸುತ್ತಮುತ್ತ ಭಾಗಗಳಲ್ಲಿ ಮಳೆ ಸ್ವಲ್ಪ ಜಾಸ್ತಿ ಇರಬಹುದು.
ಈಗಿನಂತೆ ಸೆ. 20ರಂದು ಸಹ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದ್ದರೆ, ಸೆ.23ರಿಂದ ಮತ್ತೆ ಮಳೆಯ ಮುನ್ಸೂಚನೆ ಇದೆ.

ಕೊಡಗು, ಹಾಸನ ಜಿಲ್ಲೆಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ಮೋಡದ ವಾತಾವರಣದ ಮುನ್ಸೂಚನೆ ಇದ್ದು ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಈ ಮಳೆಯ ವಾತಾವರಣವು ಸೆಪ್ಟೆಂಬರ್ ಕೊನೆಯವರೆಗೂ ಮುಂದುವರಿಯುವ ಲಕ್ಷಣಗಳಿವೆ.

ಉತ್ತರ ಒಳನಾಡಿನ ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, ಹಾವೇರಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ತುಮಕೂರು ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಸೆ. 20ರಂದು ಕರ್ನಾಟಕ – ಮಹಾರಾಷ್ಟ್ರ ಗಡಿ ಭಾಗಗಳಲ್ಲಿ ಮಳೆಯ ಸಾಧ್ಯತೆಗಳಿದ್ದು, 21ರಿಂದ ಉತ್ತರ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆ ಆರಂಭವಾಗುವ ಸಾಧ್ಯತೆಗಳಿವೆ. 23ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯಾಗುವ ಲಕ್ಷಣಗಳಿವೆ. ಈ ಮಳೆಯ ವಾತಾವರಣವು ಸೆಪ್ಟೆಂಬರ್ ಕೊನೆಯವರೆಗೂ ಮುಂದುವರಿಯುವ ಸಾಧ್ಯತೆಗಳಿವೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ
March 7, 2026
3:02 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ
March 7, 2026
2:12 PM
by: ಸಾಯಿಶೇಖರ್ ಕರಿಕಳ
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ
March 7, 2026
11:36 AM
by: ಮಿರರ್‌ ಡೆಸ್ಕ್
ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..
March 7, 2026
7:29 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror