20.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ, ಸುಬ್ರಮಣ್ಯ, ಸುಳ್ಯ ಸುತ್ತಮುತ್ತ ಭಾಗಗಳಲ್ಲಿ ಮಳೆ ಸ್ವಲ್ಪ ಜಾಸ್ತಿ ಇರಬಹುದು.
ಈಗಿನಂತೆ ಸೆ. 20ರಂದು ಸಹ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದ್ದರೆ, ಸೆ.23ರಿಂದ ಮತ್ತೆ ಮಳೆಯ ಮುನ್ಸೂಚನೆ ಇದೆ.
ಕೊಡಗು, ಹಾಸನ ಜಿಲ್ಲೆಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ಮೋಡದ ವಾತಾವರಣದ ಮುನ್ಸೂಚನೆ ಇದ್ದು ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಈ ಮಳೆಯ ವಾತಾವರಣವು ಸೆಪ್ಟೆಂಬರ್ ಕೊನೆಯವರೆಗೂ ಮುಂದುವರಿಯುವ ಲಕ್ಷಣಗಳಿವೆ.
ಉತ್ತರ ಒಳನಾಡಿನ ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, ಹಾವೇರಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ತುಮಕೂರು ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…