20.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ, ಸುಬ್ರಮಣ್ಯ, ಸುಳ್ಯ ಸುತ್ತಮುತ್ತ ಭಾಗಗಳಲ್ಲಿ ಮಳೆ ಸ್ವಲ್ಪ ಜಾಸ್ತಿ ಇರಬಹುದು.
ಈಗಿನಂತೆ ಸೆ. 20ರಂದು ಸಹ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದ್ದರೆ, ಸೆ.23ರಿಂದ ಮತ್ತೆ ಮಳೆಯ ಮುನ್ಸೂಚನೆ ಇದೆ.
ಕೊಡಗು, ಹಾಸನ ಜಿಲ್ಲೆಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ಮೋಡದ ವಾತಾವರಣದ ಮುನ್ಸೂಚನೆ ಇದ್ದು ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಈ ಮಳೆಯ ವಾತಾವರಣವು ಸೆಪ್ಟೆಂಬರ್ ಕೊನೆಯವರೆಗೂ ಮುಂದುವರಿಯುವ ಲಕ್ಷಣಗಳಿವೆ.
ಉತ್ತರ ಒಳನಾಡಿನ ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, ಹಾವೇರಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ತುಮಕೂರು ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.ಮುಂದಿನ ಜೂನ್‌ನಿಂದ ರಾಜ್ಯದಲ್ಲಿ 1,225 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಆರಂಭಿಸಿ, ಅಲ್ಲಿಗೆ ತೆರಳುವ…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅಕ್ಟೋಬರ್ 25ರವರೆಗೆ ಮಳೆಯ ಸಾಧ್ಯತೆ ಮುಂದುವರಿದಿದ್ದು, ಅಕ್ಟೋಬರ್…
ಮಹಾನವಮಿಯ ನಿಜವಾದ ಸಂದೇಶವೆಂದರೆ ರಾವಣ ಮತ್ತು ಮಹಿಷಾಸುರರ ಸಂಹಾರವನ್ನು ಸ್ಮರಿಸುವುದಷ್ಟೇ ಅಲ್ಲ, ನಮ್ಮೊಳಗಿನ…
ಮಿಜೋರಾಂನಲ್ಲಿ ಅಡಿಕೆ ತೋಟಗಳಿಗೆ ಕಾಡುತ್ತಿರುವ ಕೀಟಬಾಧೆ ನಿಯಂತ್ರಿಸಲು ವೈಜ್ಞಾನಿಕ ಕ್ರಮಗಳು ಮತ್ತು ಆರ್ಥಿಕ…
ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಮೆಸ್ಕಾಂ ವತಿಯಿಂದ ಪ್ರಧಾನಮಂತ್ರಿ ಸೂರ್ಯಘರ್ ಯೋಜನೆಯ ಕುರಿತು ಸಾರ್ವಜನಿಕರಿಗೆ…
ರಾಷ್ಟ್ರೀಯ ಜೀವ ವೈವಿಧ್ಯ ಪ್ರಾಧಿಕಾರವು 29 ರಾಜ್ಯ ಜೀವ ವೈವಿಧ್ಯ ಮಂಡಳಿಗಳು ಮತ್ತು…