ಹವಾಮಾನ ವರದಿ | 22.09.2024 | ರಾಜ್ಯದಲ್ಲಿ ಮತ್ತೆ ಕೆಲವು ಕಡೆ ಮಳೆ ಸಾಧ್ಯತೆ

September 22, 2024
11:50 AM

23.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಸೆ. 25ರ ವರೆಗೂ ದಿನಕ್ಕೆ ಒಂದೆರಡು ಮಳೆ ಮುಂದುವರಿಯುವ ಮುನ್ಸೂಚನೆ ಇದ್ದು, ಆಮೇಲೆ ಬಿಡುವಿದ್ದರೂ, ಸೆ. 28ರಿಂದ ಮತ್ತೆ ಮಳೆ ಆರಂಭವಾಗುವ ಲಕ್ಷಣಗಳಿವೆ.

ಕೊಡಗಿನ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದು, ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದರೆ, ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮಲೆನಾಡು ಭಾಗಗಳಲ್ಲಿ ಅಷ್ಟೇನು ಮಳೆಯ ಮುನ್ಸೂಚನೆ ಇಲ್ಲದಿದ್ದರೂ, ಸೆ. 29ರಿಂದ ಉತ್ತಮ ಮಳೆಯ ಮುನ್ಸೂಚನೆ ಇದೆ.

ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಬಳ್ಳಾರಿ, ರಾಯಚೂರು, ವಿಜಯಪುರ, ಕಲಬುರ್ಗಿ ಹಾಗೂ ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ದಕ್ಷಿಣ ಒಳನಾಡಿನ ಮೈಸೂರು, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಈಗಿನಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಸೆ.25ರ ತನಕ ಮಳೆ ಮುಂದುವರಿಯುವ ಮುನ್ಸೂಚನೆ ಇದ್ದು, ನಂತರ ಬಿಡುವಿದ್ದರೂ ಸೆ.28ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಮತ್ತೆರಡು ದಿನಗಳಲ್ಲಿ ಉತ್ತರ ಒಳನಾಡು ಭಾಗಗಳಲ್ಲಿಯೂ ಮಳೆಯ ಸಾಧ್ಯತೆಗಳಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಅಂದಿಗೂ, ಇಂದಿಗೂ ಮತ್ತು ಮುಂದೆಯೂ ಅಡಿಕೆಯ ಜೊತೆ ಕೋಕೋ ಒಂದು ಸೂಕ್ತ ಉಪಬೆಳೆ
October 7, 2026
11:35 PM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಅಡಿಕೆ ಕ್ಷೇತ್ರಕ್ಕೆ ಬೇಕಿದೆ ಹೊಸ ರಾಷ್ಟ್ರೀಯ ಸಮನ್ವಯ ಮಾದರಿ
October 7, 2026
11:22 PM
by: ಅರುಣ್‌ ಕುಮಾರ್ ಕಾಂಚೋಡು
ಹವಾಮಾನ ವರದಿ | 07-10-2026 | ಮುಂಗಾರು ಮುಗಿದಿದೆ… ಹಿಂಗಾರು ಮಳೆಯ ಸರದಿ ಆರಂಭವಾಗುತ್ತಿದೆಯೇ?
October 7, 2026
12:40 PM
by: ಸಾಯಿಶೇಖರ್ ಕರಿಕಳ
ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ
October 7, 2026
7:02 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror