23.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಸೆ. 25ರ ವರೆಗೂ ದಿನಕ್ಕೆ ಒಂದೆರಡು ಮಳೆ ಮುಂದುವರಿಯುವ ಮುನ್ಸೂಚನೆ ಇದ್ದು, ಆಮೇಲೆ ಬಿಡುವಿದ್ದರೂ, ಸೆ. 28ರಿಂದ ಮತ್ತೆ ಮಳೆ ಆರಂಭವಾಗುವ ಲಕ್ಷಣಗಳಿವೆ.
ಕೊಡಗಿನ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದು, ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದರೆ, ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮಲೆನಾಡು ಭಾಗಗಳಲ್ಲಿ ಅಷ್ಟೇನು ಮಳೆಯ ಮುನ್ಸೂಚನೆ ಇಲ್ಲದಿದ್ದರೂ, ಸೆ. 29ರಿಂದ ಉತ್ತಮ ಮಳೆಯ ಮುನ್ಸೂಚನೆ ಇದೆ.
ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಬಳ್ಳಾರಿ, ರಾಯಚೂರು, ವಿಜಯಪುರ, ಕಲಬುರ್ಗಿ ಹಾಗೂ ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಶೇ.30-40 ರಷ್ಟು ಅಡಿಕೆ ಕೊಳೆರೋಗದಿಂದ ಹಾನಿಯಾಗಿರುವ ಹಾಗೂ ಶೇ.50 ಕ್ಕಿಂತ ಅಧಿಕ ಅಡಿಕೆ…
ಹಲಸಿನ ಬೇಳೆ ಸೂಪ್ ಗೆ ಬೇಕಾಗುವ ವಸ್ತುಗಳು : ಹಲಸಿನ ಬೇಳೆ, ಉಪ್ಪು…
ಮಗನಿಗೆ ತಂದೆ, ಮಗಳಿಗೆ ತಾಯಿ, ಸಿಬ್ಬಂದಿಗಳಿಗೆ ಸಂಸ್ಥೆಯು - ಕಾಮಧೇನು. ಕಾಮಿಸಿದ, ಇಚ್ಛಿಸಿದ…
ಪ್ರೀತಿ ಎಂದರೆ ಜೀವನದ ಅತ್ಯುತ್ತಮ ಅನುಭವಗಳಲ್ಲಿ ಒಂದು. ಆದರೆ ಎಲ್ಲರಿಗೂ ಪ್ರೀತಿಯಲ್ಲಿ ಒಂದೇ…
ಕಾಸರಗೋಡು ಮೂಲದ ಸ್ವಾಮೀಜಿಯೊಬ್ಬರ ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಈಚೆಗೆ ನಡೆದ ತಾಳಮದ್ದಳೆ ಸಪ್ತಾಹ ಕಾರ್ಯಕ್ರಮದಲ್ಲಿ…
ನಾಲಿಗೆ ಶುದ್ಧವಾಗಿದ್ದರೆ ಮಾತ್ರ ನಮ್ಮ ವ್ಯಕ್ತಿತ್ವವೂ ಶುದ್ಧವಾಗಿರಲು ಸಾಧ್ಯ; ಆದ್ದರಿಂದ ಕಲುಷಿತಗೊಂಡಿರುವ ನಮ್ಮ…