23.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಸೆ. 25ರ ವರೆಗೂ ದಿನಕ್ಕೆ ಒಂದೆರಡು ಮಳೆ ಮುಂದುವರಿಯುವ ಮುನ್ಸೂಚನೆ ಇದ್ದು, ಆಮೇಲೆ ಬಿಡುವಿದ್ದರೂ, ಸೆ. 28ರಿಂದ ಮತ್ತೆ ಮಳೆ ಆರಂಭವಾಗುವ ಲಕ್ಷಣಗಳಿವೆ.
ಕೊಡಗಿನ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದು, ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದರೆ, ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮಲೆನಾಡು ಭಾಗಗಳಲ್ಲಿ ಅಷ್ಟೇನು ಮಳೆಯ ಮುನ್ಸೂಚನೆ ಇಲ್ಲದಿದ್ದರೂ, ಸೆ. 29ರಿಂದ ಉತ್ತಮ ಮಳೆಯ ಮುನ್ಸೂಚನೆ ಇದೆ.
ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಬಳ್ಳಾರಿ, ರಾಯಚೂರು, ವಿಜಯಪುರ, ಕಲಬುರ್ಗಿ ಹಾಗೂ ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಮೈಸೂರು, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಸೆ.25ರ ತನಕ ಮಳೆ ಮುಂದುವರಿಯುವ ಮುನ್ಸೂಚನೆ ಇದ್ದು, ನಂತರ ಬಿಡುವಿದ್ದರೂ ಸೆ.28ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಮತ್ತೆರಡು ದಿನಗಳಲ್ಲಿ ಉತ್ತರ ಒಳನಾಡು ಭಾಗಗಳಲ್ಲಿಯೂ ಮಳೆಯ ಸಾಧ್ಯತೆಗಳಿವೆ.ಮಳೆ ಕೊರತೆಯಿಂದ ಬರ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ರಾಜ್ಯ…
ಗುಜರಾತ್‌ನ ನೀರಿನ ಆಡಳಿತದ ಅನುಭವಗಳನ್ನು ಆಧರಿಸಿದ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’…
ಅಡಿಕೆ ಮತ್ತು ತೆಂಗಿನ ತೋಟಗಳಲ್ಲಿ ಉಪಬೆಳೆಯಾಗಿ ಕೋಕೋಗೆ ಉತ್ತಮ ಅವಕಾಶಗಳಿದ್ದರೂ ಬೆಲೆ ಏರಿಳಿತ,…
ಅಡಿಕೆ ಕ್ಷೇತ್ರದಲ್ಲಿ ಉತ್ಪಾದನೆ, ದಾಸ್ತಾನು, ಬೇಡಿಕೆ, ಆಮದು, ಮಾರುಕಟ್ಟೆ ಮತ್ತು ಉತ್ಪಾದನಾ ವೆಚ್ಚದ…
ಕರ್ನಾಟಕದಿಂದ ನೈಋತ್ಯ ಮುಂಗಾರು ಸಂಪೂರ್ಣ ಹಿಂದೆ ಸರಿದಿದ್ದು, ಅ.11ರ ಸುಮಾರಿಗೆ ಹಿಂಗಾರು ಆರಂಭಕ್ಕೆ…
ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…