29.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಸೆ. 30ರವರೆಗೂ ಗುಡುಗು ಸಹಿತ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಕೊಡಗು ಬಹುತೇಕ ಭಾಗಗಳಲ್ಲಿ, ಹಾಸನ, ಚಿಕ್ಕಮಗಳೂರು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ, ಸೆ.30ರ ವರೆಗೂ ಮಲೆನಾಡಿನ ಬಹುತೇಕ ಭಾಗಗಳಲ್ಲಿ ಸಂಜೆ, ರಾತ್ರಿಯ ವೇಳೆ ಗುಡುಗು ಸಹಿತ ಉತ್ತಮ ಮಳೆ ಮುಂದುವರಿಯುವ ಲಕ್ಷಣಗಳಿವೆ. ನಂತರ ಒಂದೆರಡು ದಿನಗಳ ಬಿಡುವಿದ್ದರೂ ಮತ್ತೆ ಗುಡುಗು ಮಳೆ ಮುಂದುವರಿಯಲಿದೆ.ಒಹಾವೇರಿ, ಧಾರವಾಡ, ಬೆಳಗಾವಿ, ಗದಗ, ರಾಯಚೂರು, ದಾವಣಗೆರೆ, ಬಳ್ಳಾರಿ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. ಉಳಿದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ (ಕೊಳ್ಳೇಗಾಲ ಭಾಗಗಳಲ್ಲಿ), ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕೆಲವು ಭಾಗಗಳಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ.ಶ್ರೀಲಂಕಾ ಕರಾವಳಿಯಲ್ಲಿ ಉಂಟಾಗಿರುವ ತಿರುವಿಕೆಯ ಪರಿಣಾಮದಿಂದ ಗಾಳಿಯು ತಮಿಳುನಾಡು ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವುದರಿಂದ ಹಾಗೂ ಅಧಿಕ ತಾಪಮಾನದಿಂದ ಸ್ಥಳೀಯ ಮೋಡಗಳೂ ಸೇರಿಕೊಂಡು ರಾಜ್ಯದಲ್ಲಿ ಗುಡುಗು ಸಹಿತ ಮಳೆಗೆ ಕಾರಣವಿರಬಹುದು.
ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ…
ಬಹುನಿರೀಕ್ಷಿತ ಆಕ್ಸಿಯಮ್ ಮಿಷನ್-4 ಇಂದು ಭಾರತೀಯ ಕಾಲಮಾನ ಮಧ್ಯಾಹ್ನ 12 ಗಂಟೆ 1ನಿಮಿಷಕ್ಕೆ…
ಕಳೆದ 11 ವರ್ಷಗಳಲ್ಲಿ ದೇಶದ ಬಡತನ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದೆ ಎಂದು ಕೇಂದ್ರ…
ಗದಗ ಜಿಲ್ಲೆಯಲ್ಲಿ ಜೂನ್ ತಿಂಗಳಲ್ಲಿ ಸಾಕಷ್ಟು ಮಳೆಯಾಗಿ ಭೂಮಿಯಲ್ಲಿ ತೇವಾಂಶ ಹೆಚ್ಚಾಗಿದೆ. ಈ…
ರಾಜ್ಯದ ಮಾವು ಬೆಳೆಗಾರರ ಹಿತ ಕಾಪಾಡುವಂತೆ ಕೇಂದ್ರ ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿ…
ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ, ಒಡಿಶಾ ಕರಾವಳಿಗೆ ತಲುಪಿರುವ ತಿರುವಿಕೆಯು ಇನ್ನೆರಡು ದಿನಗಳಲ್ಲಿ ಶಿಥಿಲಗೊಳ್ಳುವ…