Advertisement
ವೆದರ್ ಮಿರರ್

ಹವಾಮಾನ ವರದಿ | 28.09.2024 | ರಾಜ್ಯದಾದ್ಯಂತ ಗುಡುಗು ಸಹಿತ ಮಳೆ ಸಾಧ್ಯತೆ

Share

29.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಸೆ. 30ರವರೆಗೂ ಗುಡುಗು ಸಹಿತ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಕೊಡಗು ಬಹುತೇಕ ಭಾಗಗಳಲ್ಲಿ, ಹಾಸನ, ಚಿಕ್ಕಮಗಳೂರು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಈಗಿನಂತೆ, ಸೆ.30ರ ವರೆಗೂ ಮಲೆನಾಡಿನ ಬಹುತೇಕ ಭಾಗಗಳಲ್ಲಿ ಸಂಜೆ, ರಾತ್ರಿಯ ವೇಳೆ ಗುಡುಗು ಸಹಿತ ಉತ್ತಮ ಮಳೆ ಮುಂದುವರಿಯುವ ಲಕ್ಷಣಗಳಿವೆ. ನಂತರ ಒಂದೆರಡು ದಿನಗಳ ಬಿಡುವಿದ್ದರೂ ಮತ್ತೆ ಗುಡುಗು ಮಳೆ ಮುಂದುವರಿಯಲಿದೆ.

ಒಹಾವೇರಿ, ಧಾರವಾಡ, ಬೆಳಗಾವಿ, ಗದಗ, ರಾಯಚೂರು, ದಾವಣಗೆರೆ, ಬಳ್ಳಾರಿ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. ಉಳಿದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.

ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ (ಕೊಳ್ಳೇಗಾಲ ಭಾಗಗಳಲ್ಲಿ), ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕೆಲವು ಭಾಗಗಳಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ.
ಈಗಿನಂತೆ ಒ. 1 ಅಥವಾ 2ರ ತನಕವೂ ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ನಂತರ ಒಂದೆರಡು ದಿನಗಳ ಬಿಡುವಿದ್ದರೂ, ಮುಂದಿನ 10 ದಿನಗಳವರೆಗೂ ಗುಡುಗು ಸಹಿತ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಶ್ರೀಲಂಕಾ ಕರಾವಳಿಯಲ್ಲಿ ಉಂಟಾಗಿರುವ ತಿರುವಿಕೆಯ ಪರಿಣಾಮದಿಂದ ಗಾಳಿಯು ತಮಿಳುನಾಡು ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವುದರಿಂದ ಹಾಗೂ ಅಧಿಕ ತಾಪಮಾನದಿಂದ ಸ್ಥಳೀಯ ಮೋಡಗಳೂ ಸೇರಿಕೊಂಡು ರಾಜ್ಯದಲ್ಲಿ ಗುಡುಗು ಸಹಿತ ಮಳೆಗೆ ಕಾರಣವಿರಬಹುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?

ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…

7 hours ago

ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು

ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…

7 hours ago

ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ

ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…

8 hours ago

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…

8 hours ago

ಹವಾಮಾನ ವರದಿ | 3-10-2026 | ಬಂಗಾಳಕೊಲ್ಲಿಯಿಂದ ತೇವಾಂಶದ ಗಾಳಿ – ಕರ್ನಾಟಕದಲ್ಲಿ ಮತ್ತೆ ಮಳೆ?

ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…

23 hours ago

ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?

ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…

1 day ago