30.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಹೆಚ್ಚು ಮಳೆಯ ಸಾಧ್ಯತೆ ಇದೆ. ಈಗಿನಂತೆ ಮುಂದಿನ 10 ದಿನಗಳವರೆಗೂ (ಮಧ್ಯೆ ಒಂದೆರಡು ದಿನ ಕಡಿಮೆ ಇರಬಹುದು) ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ. ಈಗಿನಂತೆ ಮುಂದಿನ 10 ದಿನಗಳವರೆಗೂ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಹಾವೇರಿ, ಧಾರವಾಡ, ಗದಗ, ದಾವಣಗೆರೆ, ಬಳ್ಳಾರಿ, ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ (ಕೊಳ್ಳೇಗಾಲ ಭಾಗಗಳಲ್ಲಿ) ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಗುಡುಗು ಸಹಿತ ಮಳೆ ಮುಂದುವರಿಯುವ ಲಕ್ಷಣಗಳಿವೆ.
ತಮಿಳುನಾಡು ಭಾಗದಿಂದ ಈಗ ಬೀಸುತ್ತಿರುವ ಗಾಳಿಯು ಮುಂದುವರಿಯಲಿದೆ. ಹಿಂಗಾರು ಇನ್ನಷ್ಟೇ ಆರಂಭವಾಗಬೇಕಿದೆ.