ಹವಾಮಾನ ವರದಿ | 14.10.2024 | ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ

October 14, 2024
2:28 PM

15.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆಯಿಂದ ಬಿಟ್ಟು ಬಿಟ್ಟು ವಾಯುಭಾರ ಕುಸಿತದ ಮಳೆ ಆರಂಭವಾಗುವ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಈಗಿನಂತೆ 16, 17 ಹಾಗೂ 18ರಂದು ಭಾರಿ ಮಳೆಯ ಮುನ್ಸೂಚನೆ ಇದೆ. ನಂತರ 2 ದಿವಸಗಳ ಮಟ್ಟಿಗೆ ಕಡಿಮೆಯಾದರೂ 21ರಿಂದ ಗುಡುಗು ಮಳೆಯೊಂದಿಗೆ ಹಿಂಗಾರು ಅರಂಭವಾಗುವ ಸಾಧ್ಯತೆ ಇದೆ.

ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ ವಾಯುಭಾರ ಕುಸಿತದ ಮಳೆ ಆರಂಭವಾಗುವ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಜಾಸ್ತಿ ಇರಬಹುದು.
ಈಗಿನಂತೆ ಅ. 16,17 ಹಾಗೂ 18ರಂದು ಅತಿ ಭಾರಿ ಮಳೆಯ ಮುನ್ಸೂಚನೆ ಇದೆ. ನಂತರ ಕಡಿಮೆಯಾದರೂ 21ರಿಂದ ಹಿಂಗಾರು ಆರಂಭವಾಗುವ ಸಾಧ್ಯತೆಗಳಿವೆ.

ಉತ್ತರ ಒಳನಾಡಿನ ಧಾರವಾಡ, ಬೆಳಗಾವಿ ಹಾಗೂ ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆ ಸಂಜೆ, ರಾತ್ರಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಬೆಳಿಗ್ಗೆಯಿಂದ ವಾಯುಭಾರ ಕುಸಿತದ ಮಳೆಯ ಮುನ್ಸೂಚನೆ ಇದೆ.

ಈಗಿನಂತೆ ಉತ್ತರ ಒಳನಾಡಿನ ಹೆಚ್ಚಿನ ಭಾಗಗಳಲ್ಲಿ ಅ. 17ರಂದು ವಾಯುಭಾರ ಕುಸಿತದ ಮಳೆಯ ಮುನ್ಸೂಚನೆ ಇದ್ದರೆ, ದಕ್ಷಿಣ ಒಳನಾಡು ಭಾಗಗಳಲ್ಲಿ ಈಗಾಗಲೇ ಮಳೆ ಆರಂಭವಾಗಿದ್ದು ಅ.16 ಹಾಗೂ 17ರಂದು ಭಾರಿ ಮಳೆಯ ಮುನ್ಸೂಚನೆ ಇದೆ. 18 ರಿಂದ ಕಡಿಮೆಯಾದರೂ, ಉತ್ತರ ಒಳನಾಡು ಭಾಗಗಳಲ್ಲಿ 19 ಅಥವಾ 20 ರಿಂದ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ 21ರಿಂದ ಹಿಂಗಾರು ಮಳೆ ಆರಂಭವಾಗುವ ಮುನ್ಸೂಚನೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಸರ್ಕಾರದ ಸೌಲಭ್ಯಕ್ಕೆ ‘ಫ್ರೂಟ್ಸ್ ಐಡಿ’ ಕಡ್ಡಾಯ | ರೈತರಿಗೆ ಸೂಚನೆ
April 7, 2026
7:41 AM
by: ಮಿರರ್‌ ಡೆಸ್ಕ್
ಗದಗ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ತಾಪಮಾನ | ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ ಜಿಲ್ಲಾಧಿಕಾರಿ
April 7, 2026
7:34 AM
by: ಮಿರರ್‌ ಡೆಸ್ಕ್
ಅಡಿಕೆ ಎಲೆ ಚುಕ್ಕಿ ರೋಗ ನಿರ್ವಹಣೆ | ಗುತ್ತಿಗಾರಿನ ಪ್ರಾತ್ಯಕ್ಷಿಕೆ ತೋಟಕ್ಕೆ ಸಿಪಿಸಿಆರ್‌ಐ ನಿರ್ದೇಶಕರ ಭೇಟಿ | ವೈಜ್ಞಾನಿಕ ಕ್ರಮಗಳು ರೈತರಿಗೆ ಆಶಾಕಿರಣ
April 6, 2026
7:32 PM
by: ದ ರೂರಲ್ ಮಿರರ್.ಕಾಂ
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ
April 6, 2026
6:59 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror