15.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆಯಿಂದ ಬಿಟ್ಟು ಬಿಟ್ಟು ವಾಯುಭಾರ ಕುಸಿತದ ಮಳೆ ಆರಂಭವಾಗುವ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ ವಾಯುಭಾರ ಕುಸಿತದ ಮಳೆ ಆರಂಭವಾಗುವ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಜಾಸ್ತಿ ಇರಬಹುದು.
ಈಗಿನಂತೆ ಅ. 16,17 ಹಾಗೂ 18ರಂದು ಅತಿ ಭಾರಿ ಮಳೆಯ ಮುನ್ಸೂಚನೆ ಇದೆ. ನಂತರ ಕಡಿಮೆಯಾದರೂ 21ರಿಂದ ಹಿಂಗಾರು ಆರಂಭವಾಗುವ ಸಾಧ್ಯತೆಗಳಿವೆ.
ಉತ್ತರ ಒಳನಾಡಿನ ಧಾರವಾಡ, ಬೆಳಗಾವಿ ಹಾಗೂ ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆ ಸಂಜೆ, ರಾತ್ರಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಬೆಳಿಗ್ಗೆಯಿಂದ ವಾಯುಭಾರ ಕುಸಿತದ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಉತ್ತರ ಒಳನಾಡಿನ ಹೆಚ್ಚಿನ ಭಾಗಗಳಲ್ಲಿ ಅ. 17ರಂದು ವಾಯುಭಾರ ಕುಸಿತದ ಮಳೆಯ ಮುನ್ಸೂಚನೆ ಇದ್ದರೆ, ದಕ್ಷಿಣ ಒಳನಾಡು ಭಾಗಗಳಲ್ಲಿ ಈಗಾಗಲೇ ಮಳೆ ಆರಂಭವಾಗಿದ್ದು ಅ.16 ಹಾಗೂ 17ರಂದು ಭಾರಿ ಮಳೆಯ ಮುನ್ಸೂಚನೆ ಇದೆ. 18 ರಿಂದ ಕಡಿಮೆಯಾದರೂ, ಉತ್ತರ ಒಳನಾಡು ಭಾಗಗಳಲ್ಲಿ 19 ಅಥವಾ 20 ರಿಂದ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ 21ರಿಂದ ಹಿಂಗಾರು ಮಳೆ ಆರಂಭವಾಗುವ ಮುನ್ಸೂಚನೆ ಇದೆ.ಲಿವ್-ಇನ್-ರಿಲೇಶನ್ಶಿಪ್ ಎಂಬುದು ಇಬ್ಬರದೇ ನಿರ್ಧಾರವಾದರೂ ಅದಕ್ಕೆ ಕಾನೂನಿನ ರಕ್ಷಣೆ ಇರಬೇಕು. ಅಂದರೆ ಅದನ್ನು…
"ಅಡಿಕೆಯ ಕುರಿತು ವೈಜ್ಞಾನಿಕ ಸಂಶೋಧನೆ ಮತ್ತು ಮಾನವ ಆರೋಗ್ಯ" ಎಂಬ ಶೀರ್ಷಿಕೆಯಲ್ಲಿ ಅಧ್ಯಯನವನ್ನು…
ಫೆಂಗಲ್ ಚಂಡಮಾರುತವು ಈಗಾಗಲೇ ದುರ್ಬಲಗೊಂಡು ಅರಬ್ಬಿ ಸಮುದ್ರ ಪ್ರವೇಶಿಸಿದೆ ಮತ್ತು ಮುಂದೆ ಪಶ್ಚಿಮಾಭಿಮುಖವಾಗಿ…
ಲೋಕಸಭೆಯಲ್ಲಿ ಗದ್ದಲದ ನಡುವೆಯೇ ಕೇಂದ್ರ ನೌಕಾಯಾನ ಸಚಿವ ಸರ್ಬಾನಂದ ಸೋನೋವಾಲ್ ಕರಾವಳಿ ನೌಕಾಯಾನ…
ಮಂಡ್ಯ ಜಿಲ್ಲೆಯ ಕೆ.ಆರ್.ಎಸ್. ಅಣೆಕಟ್ಟೆಯ ಹಿನ್ನೀರಿನ ಪ್ರದೇಶದಲ್ಲಿ ಕಾಡಾನೆಗಳು ದಾಂಧಲೆ ನಡೆಸಿವೆ. ಅಣೆಕಟ್ಟೆಯ…
ಬೀದಿ ಬದಿ ವ್ಯಾಪಾರಸ್ಥರ ಸರ್ವತೋಮುಖ ಅಭಿವೃದ್ಧಿಗಾಗಿ ಪ್ರಧಾನ ಮಂತ್ರಿ ಸ್ವ ನಿಧಿ ಯೋಜನೆಯ…