15.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆಯಿಂದ ಬಿಟ್ಟು ಬಿಟ್ಟು ವಾಯುಭಾರ ಕುಸಿತದ ಮಳೆ ಆರಂಭವಾಗುವ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ 16, 17 ಹಾಗೂ 18ರಂದು ಭಾರಿ ಮಳೆಯ ಮುನ್ಸೂಚನೆ ಇದೆ. ನಂತರ 2 ದಿವಸಗಳ ಮಟ್ಟಿಗೆ ಕಡಿಮೆಯಾದರೂ 21ರಿಂದ ಗುಡುಗು ಮಳೆಯೊಂದಿಗೆ ಹಿಂಗಾರು ಅರಂಭವಾಗುವ ಸಾಧ್ಯತೆ ಇದೆ.ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ ವಾಯುಭಾರ ಕುಸಿತದ ಮಳೆ ಆರಂಭವಾಗುವ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಜಾಸ್ತಿ ಇರಬಹುದು.
ಈಗಿನಂತೆ ಅ. 16,17 ಹಾಗೂ 18ರಂದು ಅತಿ ಭಾರಿ ಮಳೆಯ ಮುನ್ಸೂಚನೆ ಇದೆ. ನಂತರ ಕಡಿಮೆಯಾದರೂ 21ರಿಂದ ಹಿಂಗಾರು ಆರಂಭವಾಗುವ ಸಾಧ್ಯತೆಗಳಿವೆ.
ಉತ್ತರ ಒಳನಾಡಿನ ಧಾರವಾಡ, ಬೆಳಗಾವಿ ಹಾಗೂ ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆ ಸಂಜೆ, ರಾತ್ರಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಬೆಳಿಗ್ಗೆಯಿಂದ ವಾಯುಭಾರ ಕುಸಿತದ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಉತ್ತರ ಒಳನಾಡಿನ ಹೆಚ್ಚಿನ ಭಾಗಗಳಲ್ಲಿ ಅ. 17ರಂದು ವಾಯುಭಾರ ಕುಸಿತದ ಮಳೆಯ ಮುನ್ಸೂಚನೆ ಇದ್ದರೆ, ದಕ್ಷಿಣ ಒಳನಾಡು ಭಾಗಗಳಲ್ಲಿ ಈಗಾಗಲೇ ಮಳೆ ಆರಂಭವಾಗಿದ್ದು ಅ.16 ಹಾಗೂ 17ರಂದು ಭಾರಿ ಮಳೆಯ ಮುನ್ಸೂಚನೆ ಇದೆ. 18 ರಿಂದ ಕಡಿಮೆಯಾದರೂ, ಉತ್ತರ ಒಳನಾಡು ಭಾಗಗಳಲ್ಲಿ 19 ಅಥವಾ 20 ರಿಂದ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ 21ರಿಂದ ಹಿಂಗಾರು ಮಳೆ ಆರಂಭವಾಗುವ ಮುನ್ಸೂಚನೆ ಇದೆ.ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…
ಕೇಂದ್ರ ಸರ್ಕಾರ 2015ರಲ್ಲಿ ದೇಶೀಯ ಹಾಗೂ ಆಮದು ಯೂರಿಯಾಗೆ ಬೇವು ಲೇಪನ ಕಡ್ಡಾಯಗೊಳಿಸುವ…
ಮನೆತನವನ್ನು ಕಟ್ಟುವುದು ಕೇವಲ ಆರ್ಥಿಕ ಸೌಲಭ್ಯಗಳನ್ನು ಒದಗಿಸುವುದಲ್ಲ; ಕುಟುಂಬದ ಸದಸ್ಯರ ನಡುವೆ ಪ್ರೀತಿ,…
ಮ್ಯಾನ್ಮಾರ್‌ನಿಂದ ಮಿಜೋರಾಂ ಮೂಲಕ ಸುಮಾರು ₹1,022 ಕೋಟಿ ಮೌಲ್ಯದ 3,103 ಮೆಟ್ರಿಕ್ ಟನ್…
ಅ.11ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದ್ದರೂ, ಅ.14–16ರಿಂದ ಹಿಂಗಾರು…
ಕೃಷಿ ಸೇರಿದಂತೆ ಕುಟುಂಬದ ಬದುಕಿನಲ್ಲಿ ಕಾಣದ ಶ್ರಮವನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸುವುದು ಸಂಬಂಧಗಳನ್ನು…