ಹವಾಮಾನ ವರದಿ | 17.10.2024 | ಸಾಮಾನ್ಯ ಮಳೆ | ಅ.24 ನಂತರ ಮಳೆ ಕಡಿಮೆ ಸಾಧ್ಯತೆ |

October 17, 2024
1:56 PM
ಅ.24ರಿಂದ ಹಿಂಗಾರು ದುರ್ಬಲಗೊಂಡು ಮಳೆ ಕಡಿಮೆಯಾಗುವ ಲಕ್ಷಣಗಳಿವೆ.

18.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಬೆಳಿಗ್ಗೆಯಿಂದಲೇ ಉತ್ತಮ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಅ.24ರಿಂದ ಹಿಂಗಾರು ದುರ್ಬಲಗೊಂಡು ಮಳೆ ಕಡಿಮೆಯಾಗುವ ಲಕ್ಷಣಗಳಿವೆ.

ಕೊಡಗು ಹೆಚ್ಚಿನ ಭಾಗಗಳಲ್ಲಿ ಮೋಡ, ತುಂತುರು ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು, ಒಳನಾಡು ಅಥವಾ ಬಯಲುಸೀಮೆಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಅ. 24ರಿಂದ ಮಳೆ ಕ್ಷೀಣಿಸುವ ಲಕ್ಷಣಗಳಿವೆ.

ಹಾವೇರಿ, ಧಾರವಾಡ, ಬೆಳಗಾವಿ (ಅಥಣಿ ಸಹಿತ), ಬಾಗಲಕೋಟೆ, ಗದಗ, ದಾವಣಗೆರೆ, ಬಳ್ಳಾರಿ, ರಾಯಚೂರು, ಕೊಪ್ಪಳ, ಯಾದಗಿರಿ, ವಿಜಯಪುರ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಕೆಲವು ಭಾಗಗಳಲ್ಲಿ ಬೆಳಿಗ್ಗೆಯಿಂದ ಮಳೆಯಾಗುತ್ತಿದೆ.

ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ( ಪಾವಗಢ ಸಹಿತ) ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಅ. 22ರಿಂದ ಮಳೆ ಕಡಿಮೆಯಾಗುವ ಸೂಚನೆಗಳಿವೆ.

ಅರಬ್ಬಿ ಸಮುದ್ರದಲ್ಲಿ ಕರ್ನಾಟಕ ಕರಾವಳಿ ಭಾಗದಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿದ್ದರ ಪರಿಣಾಮ ರಾಜ್ಯದ ದಕ್ಷಿಣ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಪಶ್ಚಿಮದ ಮೋಡದಿಂದ ಹಾಗೂ ಉತ್ತರ ಕರ್ನಾಟಕದ ಭಾಗಗಳಲ್ಲಿ ಹಿಂಗಾರು (ಪೂರ್ವದ ಮೋಡದಿಂದ) ಮಳೆಯಾಗುತ್ತಿದೆ.

ಅ. 20 ಅಥವಾ 21ರಂದ ಬಂಗಾಳಕೊಲ್ಲಿಯ ಅಂಡಮಾನ್ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಉತ್ತರಾಭಿಮುಖವಾಗಿ ಚಲಿಸುವ ಸಾಧ್ಯತೆಗಳಿವೆ. ಇದರ ಪರಿಣಾಮದಿಂದ ಹಿಂಗಾರು ದುರ್ಬಲಗೊಳ್ಳುವ ಲಕ್ಷಣಗಳಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ
ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ
April 1, 2026
6:13 AM
by: ಮಿರರ್‌ ಡೆಸ್ಕ್
ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ
April 1, 2026
6:07 AM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್
April 1, 2026
5:56 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror