18.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಬೆಳಿಗ್ಗೆಯಿಂದಲೇ ಉತ್ತಮ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಅ.24ರಿಂದ ಹಿಂಗಾರು ದುರ್ಬಲಗೊಂಡು ಮಳೆ ಕಡಿಮೆಯಾಗುವ ಲಕ್ಷಣಗಳಿವೆ.
ಕೊಡಗು ಹೆಚ್ಚಿನ ಭಾಗಗಳಲ್ಲಿ ಮೋಡ, ತುಂತುರು ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು, ಒಳನಾಡು ಅಥವಾ ಬಯಲುಸೀಮೆಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಅ. 24ರಿಂದ ಮಳೆ ಕ್ಷೀಣಿಸುವ ಲಕ್ಷಣಗಳಿವೆ.
ಹಾವೇರಿ, ಧಾರವಾಡ, ಬೆಳಗಾವಿ (ಅಥಣಿ ಸಹಿತ), ಬಾಗಲಕೋಟೆ, ಗದಗ, ದಾವಣಗೆರೆ, ಬಳ್ಳಾರಿ, ರಾಯಚೂರು, ಕೊಪ್ಪಳ, ಯಾದಗಿರಿ, ವಿಜಯಪುರ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಕೆಲವು ಭಾಗಗಳಲ್ಲಿ ಬೆಳಿಗ್ಗೆಯಿಂದ ಮಳೆಯಾಗುತ್ತಿದೆ.
ಅರಬ್ಬಿ ಸಮುದ್ರದಲ್ಲಿ ಕರ್ನಾಟಕ ಕರಾವಳಿ ಭಾಗದಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿದ್ದರ ಪರಿಣಾಮ ರಾಜ್ಯದ ದಕ್ಷಿಣ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಪಶ್ಚಿಮದ ಮೋಡದಿಂದ ಹಾಗೂ ಉತ್ತರ ಕರ್ನಾಟಕದ ಭಾಗಗಳಲ್ಲಿ ಹಿಂಗಾರು (ಪೂರ್ವದ ಮೋಡದಿಂದ) ಮಳೆಯಾಗುತ್ತಿದೆ.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…