ಹವಾಮಾನ ವರದಿ| 20-10-2024 | ರಾಜ್ಯದಲ್ಲಿ ತಗ್ಗಿದ ಮಳೆಯ ಪ್ರಮಾಣ | ಬಲಗೊಳ್ಳುತ್ತಿರುವ ಡಾನಾ ಚಂಡಮಾರುತ

October 20, 2024
2:07 PM

21.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಜಿಲ್ಲೆಯಲ್ಲಿ ಕೆಲವು ಭಾಗಗಳಲ್ಲಿ ಈಗಾಗಲೇ ಮಳೆಯಾಗಿದ್ದು, ಸಂಜೆ ಅಥವಾ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲೂ ಕೆಲವು ಭಾಗಗಳಲ್ಲಿ ಮುಂಜಾನೆ ಮಳೆಯಾಗಿದ್ದು, ಸಂಜೆ ಅಥವಾ ರಾತ್ರಿ ಅಲ್ಲಲ್ಲಿ ಮತ್ತೆ ಮಳೆಯ ಮುನ್ಸೂಚೆನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಜಾಸ್ತಿ ಇರಬಹುದು.
ಈಗಿನಂತೆ ಒಕ್ಟೊಬರ್ 21ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.

ಕೊಡಗು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ ಅಥವಾ ರಾತ್ರಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಒಕ್ಟೊಬರ್ 25ರ ತನಕವೂ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ದಾವಣಗೆರೆ, ಬಳ್ಳಾರಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಉತ್ತಮ ಮಳೆಯ ಮುನ್ಸೂಚನೆ ಇದೆ. ವಿಜಯಪುರ, ಕೊಪ್ಪಳ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಒಕ್ಟೊಬರ್ 25ರ ತನಕ ಹಿಂಗಾರು ಮಳೆ ಮುಂದುವರಿಯುವ ಸೂಚನೆಗಳಿವೆ.

ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಶಿಥಿಲಗೊಳ್ಳುತ್ತಿದ್ದು, ಬಂಗಾಳಕೊಲ್ಲಿಯ ಅಂಡಮಾನ್ ಪೂರ್ವ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗುತ್ತಿದೆ. ಇದು ಪ್ರಭಲಗೊಂಡು “ಡಾನಾ” ಚಂಡಮಾರುತವಾಗಿ ಒಡಿಸ್ಸಾ ಕರಾವಳಿಗೆ ಒಕ್ಟೊಬರ್ 24ರಂದು ಅಪ್ಪಳಿಸುವ ಲಕ್ಷಣಗಳಿವೆ. ಇದರೊಂದಿಗೆ ಹಿಂಗಾರು ಸಂಪೂರ್ಣ ದುರ್ಬಲಗೊಳ್ಳುವ ಸಾಧ್ಯತೆಗಳಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 21-09-2026 | ಕರಾವಳಿಯಲ್ಲಿ ಜೋರು ಮಳೆಯ ಸಾಧ್ಯತೆ ಕಡಿಮೆ
September 21, 2026
12:57 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ
September 20, 2026
3:13 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ
September 20, 2026
10:43 AM
by: ದ ರೂರಲ್ ಮಿರರ್.ಕಾಂ
ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ
September 19, 2026
12:06 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror