21.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಜಿಲ್ಲೆಯಲ್ಲಿ ಕೆಲವು ಭಾಗಗಳಲ್ಲಿ ಈಗಾಗಲೇ ಮಳೆಯಾಗಿದ್ದು, ಸಂಜೆ ಅಥವಾ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲೂ ಕೆಲವು ಭಾಗಗಳಲ್ಲಿ ಮುಂಜಾನೆ ಮಳೆಯಾಗಿದ್ದು, ಸಂಜೆ ಅಥವಾ ರಾತ್ರಿ ಅಲ್ಲಲ್ಲಿ ಮತ್ತೆ ಮಳೆಯ ಮುನ್ಸೂಚೆನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಜಾಸ್ತಿ ಇರಬಹುದು.
ಈಗಿನಂತೆ ಒಕ್ಟೊಬರ್ 21ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.
ಕೊಡಗು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ ಅಥವಾ ರಾತ್ರಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಒಕ್ಟೊಬರ್ 25ರ ತನಕವೂ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ದಾವಣಗೆರೆ, ಬಳ್ಳಾರಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಉತ್ತಮ ಮಳೆಯ ಮುನ್ಸೂಚನೆ ಇದೆ. ವಿಜಯಪುರ, ಕೊಪ್ಪಳ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಶಿಥಿಲಗೊಳ್ಳುತ್ತಿದ್ದು, ಬಂಗಾಳಕೊಲ್ಲಿಯ ಅಂಡಮಾನ್ ಪೂರ್ವ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗುತ್ತಿದೆ. ಇದು ಪ್ರಭಲಗೊಂಡು “ಡಾನಾ” ಚಂಡಮಾರುತವಾಗಿ ಒಡಿಸ್ಸಾ ಕರಾವಳಿಗೆ ಒಕ್ಟೊಬರ್ 24ರಂದು ಅಪ್ಪಳಿಸುವ ಲಕ್ಷಣಗಳಿವೆ. ಇದರೊಂದಿಗೆ ಹಿಂಗಾರು ಸಂಪೂರ್ಣ ದುರ್ಬಲಗೊಳ್ಳುವ ಸಾಧ್ಯತೆಗಳಿವೆ.
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…