ಹವಾಮಾನ ವರದಿ | 21.10.2024 | ರಾಜ್ಯದ ಹಲವೆಡೆ ಗುಡುಗು ಸಹಿತ ತುಂತುರು ಮಳೆ ಸಾಧ್ಯತೆ

October 21, 2024
12:31 PM

22.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಸುಳ್ಯ, ಸುಬ್ರಮಣ್ಯ, ಪುತ್ತೂರು ಬಂಟ್ವಾಳ, ಕಾಸರಗೋಡು ಭಾಗಗಳಲ್ಲಿ ಮಧ್ಯಾಹ್ನ ನಂತರ, ಸಂಜೆ ಅಲ್ಲಲ್ಲಿ ಗುಡುಗು ಸಹಿತ ತುಂತುರು ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಸ್ವಲ್ಪ ಜಾಸ್ತಿ ಇರಬಹುದು.
ಈಗಿನಂತೆ ಅ. 25ರ ತನಕ ಕರಾವಳಿಯಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಕೊಡಗು ಜಿಲ್ಲೆಯ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಹಾಸನ ಜಿಲ್ಲೆಯ ಬಯಲುಸೀಮೆಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಅ. 24ರ ತನಕ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಇವತ್ತು ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ದಾವಣಗೆರೆ, ಬಳ್ಳಾರಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದರೆ, ಕೊಪ್ಪಳ, ವಿಜಯಪುರ, ಕಲಬುರ್ಗಿ, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ (ಗುಂಡ್ಲುಪೇಟೆ ಸಹಿತ), ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. (ಕೆಲವು ಭಾಗಗಳಲ್ಲಿ ಮುಂಜಾನೆ ಮಳೆಯಾಗಿದೆ). ಈಗಿನಂತೆ ಅ. 25ರ ತನಕ ಹಿಂಗಾರು ಮಳೆ ಮುಂದುವರಿಯುವ ಲಕ್ಷಣಗಳಿವೆ.

ಅರಬ್ಬಿ ಸಮುದ್ರದಿಂದ ಶ್ರೀಲಂಕಾ ಕರಾವಳಿ ಮೂಲಕ ಬಂಗಾಳಕೊಲ್ಲಿ ಕಡೆ ಬೀಸುವ ಗಾಳಿಯು ತಮಿಳುನಾಡು ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವುದರಿಂದ ( ಆಗ್ನೇಯದಿಂದ ವಾಯವ್ಯ ಕಡೆಗೆ) ದಕ್ಷಿಣ ಒಳನಾಡು, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಉತ್ತರ ಕರಾವಳಿ ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದೆ.

ಬಂಗಾಳಕೊಲ್ಲಿಯ ಡಾನಾ ಚಂಡಮಾರುತವು ಅ. 24ರಂದು ಬಾಂಗ್ಲಾದೇಶ ಕರಾವಳಿಗೆ ಅಪ್ಪಳಿಸುವ ಸಾಧ್ಯತೆಗಳಿದ್ದು, ಇದರಿಂದ ಹಿಂಗಾರು ಮಾರುತಗಳಿಗೆ ಭಾರಿ ಹಿನ್ನಡೆ ಉಂಟಾಗುವ ಲಕ್ಷಣಗಳಿವೆ. ಈಗಿನಂತೆ ಅ. 26ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಆವರಿಸುವ ಸಾಧ್ಯತೆಗಳಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!
March 25, 2026
12:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್
ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ
March 23, 2026
10:18 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror