23.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಳೆದ ಮೂರು ನಾಲ್ಕು ದಿನಗಳ ಕಾಲ ರಾಜ್ಯದ ಉತ್ತರ ಕರಾವಳಿ, ಶಿವಮೊಗ್ಗ ಭಾಗಗಳಲ್ಲಿ ರಾತ್ರಿ ಅನಿರೀಕ್ಷಿತ ಭಾರಿ ಪ್ರಮಾಣದಲ್ಲಿ ಮಳೆಯಾಗಿದೆ. ಅರಬ್ಬಿ ಸಮುದ್ರದ ಕರಾವಳಿ ತೀರದಲ್ಲಿ ಗಾಳಿಯ ತಿರುಗುವಿಕೆಯ ಪರಿಣಾಮದಿಂದ ಈ ಮಳೆ ಇದ್ದಿರಬಹುದು. ಇವತ್ತು ಈಗಿನಂತೆ ಅಂತಹ ಗಾಳಿಯ ಚಲನೆ ಕಾಣಿಸುತ್ತಿಲ್ಲವಾದ್ದರಿಂದ ಭಾರಿ ಮಳೆಯ ಸಾಧ್ಯತೆ ಕಡಿಮೆ ಇರಬಹುದು.
ಕಾಸರಗೋಡು ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಮಳೆಯ ಸಾಧ್ಯತೆ ಕ್ಷೀಣಿಸುತ್ತಿದೆ. ದಕ್ಷಿಣ ಕನ್ನಡದ ಸುಳ್ಯ, ಸುಬ್ರಮಣ್ಯ, ಬೆಳ್ತಂಗಡಿ ಸುತ್ತಮುತ್ತ ಭಾಗಗಳಲ್ಲಿ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಅ. 25ರಿಂದ ಮಳೆ ಕಡಿಮೆಯಾಗಿ 26ರಿಂದ ಹೆಚ್ಚಿನ ಅವಧಿಯೂ ಬಿಸಿಲಿನ ವಾತಾವರಣ ಇರಬಹುದು.
ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಅ .25ರಿಂದ ಮಳೆ ಕಡಿಮೆಯಾಗಲಿದ್ದು, ಹೆಚ್ಚಿನ ಅವಧಿಯೂ ಬಿಸಿಲಿನ ವಾತಾವರಣದ ಲಕ್ಷಣಗಳಿವೆ.
ಹಿಂಗಾರು ಮಾರುತಗಳ ದಿಕ್ಕು ಬದಲಾಗಿದ್ದರಿಂದ ಒಳನಾಡು ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದೆಯೇ? ಮಾರುತಗಳು ಆಗ್ನೇಯದಿಂದ ವಾಯವ್ಯಕ್ಕೆ (ಸಾಂಪ್ರದಾಯಿಕವಾಗಿ ಈಶಾನ್ಯದಿಂದ ನೈರುತ್ಯಕ್ಕೆ) ಚಲಿಸುತ್ತಿವೆ.
ಹಾವೇರಿ, ಧಾರವಾಡ, ಬೆಳಗಾವಿ, ಗದಗ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಬಾಗಲಕೋಟೆ, ವಿಜಯಪುರ, ಕೊಪ್ಪಳ, ರಾಯಚೂರು, ಯಾದಗಿರಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಡಾನಾ ಚಂಡಮಾರುತವು ಅ.24ರಂದು ಪಶ್ಚಿಮ ಬಂಗಾಳ ಹಾಗೂ ಒಡಿಸ್ಸಾ ಕರಾವಳಿಗೆ ಅಪ್ಪಳಿಸುವ ಸಾಧ್ಯತೆಗಳಿವೆ. ಈ ಸಂದರ್ಭದಲ್ಲಿ ಉತ್ತರ ಒಳನಾಡಿನಲ್ಲಿ ಅ. 24ರಿಂದ ಹಾಗೂ ದಕ್ಷಿಣ ಒಳನಾಡಿನಲ್ಲಿ ಅ. 25ರಿಂದ ಮಳೆ ಕಡಿಮೆಯಾಗಿ ಹೆಚ್ಚಿನ ಅವಧಿಯೂ ಬಿಸಿಲಿನ ವಾತಾವರಣದ ಸಾಧ್ಯತೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಒಂದೆರಡು ಕಡೆ ಹಾಗೂ…
ಉದ್ಯೋಗದ ಪರೀಕ್ಷೆಗಳಿಗೂ ಧಾರ್ಮಿಕ ಸಂಕೇತಗಳಿಗೂ ಯಾಕೆ ಹೊಂದಿ ಬರುವುದಿಲ್ಲ? ಇದೊಂದು ಮಿಲಿಯನ್ ಡಾಲರ್…
ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ ಮೇ ತಿಂಗಳ 2 ರಿಂದ…
ವಿಶ್ವವಿಖ್ಯಾತ ಜೋಗ ಜಲಪಾತದಲ್ಲಿ ಪ್ರವಾಸಿಗರನ್ನು ಮತ್ತಷ್ಟು ಆಕರ್ಷಿಸುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಿವಿಧ…
ಈಗಿನಂತೆ ಮೇ 1ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಹಾಗೂ ಮೇ 5ರಿಂದ ಉತ್ತರ…
ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ ನಡೆಯಲಿದೆ. ಮೈಸೂರು ಜಿಲ್ಲೆಯ…