Advertisement
ವೆದರ್ ಮಿರರ್

ಹವಾಮಾನ ವರದಿ | 22.10.2024 | ರಾಜ್ಯದಲ್ಲಿ ಸಾಮಾನ್ಯ ಮಳೆ ಮುಂದುವರಿಕೆ | ಅ.25ರಿಂದ ಮಳೆ ಕಡಿಮೆ ಸಾಧ್ಯತೆ| ಅ.24ರಂದು ಒಡಿಸ್ಸಾ ಪಶ್ಚಿಮ ಬಂಗಾಳ ಕರಾವಳಿಗೆ ಡಾನಾ ಚಂಡಮಾರುತ

Share

23.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಳೆದ ಮೂರು ನಾಲ್ಕು ದಿನಗಳ ಕಾಲ ರಾಜ್ಯದ ಉತ್ತರ ಕರಾವಳಿ, ಶಿವಮೊಗ್ಗ ಭಾಗಗಳಲ್ಲಿ ರಾತ್ರಿ ಅನಿರೀಕ್ಷಿತ ಭಾರಿ ಪ್ರಮಾಣದಲ್ಲಿ ಮಳೆಯಾಗಿದೆ. ಅರಬ್ಬಿ ಸಮುದ್ರದ ಕರಾವಳಿ ತೀರದಲ್ಲಿ ಗಾಳಿಯ ತಿರುಗುವಿಕೆಯ ಪರಿಣಾಮದಿಂದ ಈ ಮಳೆ ಇದ್ದಿರಬಹುದು. ಇವತ್ತು ಈಗಿನಂತೆ ಅಂತಹ ಗಾಳಿಯ ಚಲನೆ ಕಾಣಿಸುತ್ತಿಲ್ಲವಾದ್ದರಿಂದ ಭಾರಿ ಮಳೆಯ ಸಾಧ್ಯತೆ ಕಡಿಮೆ ಇರಬಹುದು.

ಕಾಸರಗೋಡು ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಮಳೆಯ ಸಾಧ್ಯತೆ ಕ್ಷೀಣಿಸುತ್ತಿದೆ. ದಕ್ಷಿಣ ಕನ್ನಡದ ಸುಳ್ಯ, ಸುಬ್ರಮಣ್ಯ, ಬೆಳ್ತಂಗಡಿ ಸುತ್ತಮುತ್ತ ಭಾಗಗಳಲ್ಲಿ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಅ. 25ರಿಂದ ಮಳೆ ಕಡಿಮೆಯಾಗಿ 26ರಿಂದ ಹೆಚ್ಚಿನ ಅವಧಿಯೂ ಬಿಸಿಲಿನ ವಾತಾವರಣ ಇರಬಹುದು.

ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಅ .25ರಿಂದ ಮಳೆ ಕಡಿಮೆಯಾಗಲಿದ್ದು, ಹೆಚ್ಚಿನ ಅವಧಿಯೂ ಬಿಸಿಲಿನ ವಾತಾವರಣದ ಲಕ್ಷಣಗಳಿವೆ.

ಹಿಂಗಾರು ಮಾರುತಗಳ ದಿಕ್ಕು ಬದಲಾಗಿದ್ದರಿಂದ ಒಳನಾಡು ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದೆಯೇ? ಮಾರುತಗಳು ಆಗ್ನೇಯದಿಂದ ವಾಯವ್ಯಕ್ಕೆ (ಸಾಂಪ್ರದಾಯಿಕವಾಗಿ ಈಶಾನ್ಯದಿಂದ ನೈರುತ್ಯಕ್ಕೆ) ಚಲಿಸುತ್ತಿವೆ.

ಹಾವೇರಿ, ಧಾರವಾಡ, ಬೆಳಗಾವಿ, ಗದಗ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಬಾಗಲಕೋಟೆ, ವಿಜಯಪುರ, ಕೊಪ್ಪಳ, ರಾಯಚೂರು, ಯಾದಗಿರಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ) ಚಿತ್ರದುರ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ರಾತ್ರಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.

ಈಗಿನಂತೆ ಡಾನಾ ಚಂಡಮಾರುತವು ಅ.24ರಂದು ಪಶ್ಚಿಮ ಬಂಗಾಳ ಹಾಗೂ ಒಡಿಸ್ಸಾ ಕರಾವಳಿಗೆ ಅಪ್ಪಳಿಸುವ ಸಾಧ್ಯತೆಗಳಿವೆ. ಈ ಸಂದರ್ಭದಲ್ಲಿ ಉತ್ತರ ಒಳನಾಡಿನಲ್ಲಿ ಅ. 24ರಿಂದ ಹಾಗೂ ದಕ್ಷಿಣ ಒಳನಾಡಿನಲ್ಲಿ ಅ. 25ರಿಂದ ಮಳೆ ಕಡಿಮೆಯಾಗಿ ಹೆಚ್ಚಿನ ಅವಧಿಯೂ ಬಿಸಿಲಿನ ವಾತಾವರಣದ ಸಾಧ್ಯತೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

9 hours ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

21 hours ago

ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ

ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…

21 hours ago

ಚಿತ್ರದುರ್ಗದಲ್ಲಿ ಕಣ್ಣೆದುರೇ ಒಣಗಿದ ಬೆಳೆ… ರೈತನಿಗೆ ದಿಕ್ಕೇ ತೋಚದ ಸ್ಥಿತಿ – ವಿಶೇಷ ಪ್ಯಾಕೇಜ್‌ಗೆ ರೈತರ ಒತ್ತಾಯ

ಚಿತ್ರದುರ್ಗ ಜಿಲ್ಲೆಯಲ್ಲಿ ಮಳೆ ಕೊರತೆ ಮತ್ತು ಕೊಳವೆ ಬಾವಿಗಳಲ್ಲಿ ನೀರು ಬತ್ತುತ್ತಿರುವುದರಿಂದ ಈರುಳ್ಳಿ,…

22 hours ago

ಗದಗ ಜಿಲ್ಲೆಯಲ್ಲಿ ಹಿಂಗಾರು ಬಿತ್ತನೆ ಆರಂಭ – ರಿಯಾಯಿತಿ ದರದಲ್ಲಿ ಕಡಲೆ, ಜೋಳ, ಶೇಂಗಾ ಬೀಜ ಲಭ್ಯ

ಗದಗ ಜಿಲ್ಲೆಯಲ್ಲಿ 2026-27ನೇ ಸಾಲಿನ ಹಿಂಗಾರು ಹಂಗಾಮು ಆರಂಭವಾಗಿದ್ದು, ಕಡಲೆ, ಜೋಳ, ಶೇಂಗಾ…

22 hours ago

ಬೆಳಗಾವಿ ರೈತರಿಗೆ ಸಾಲ ಮರುಪಾವತಿಯಲ್ಲಿ ಪರಿಹಾರ ಸಿಗುತ್ತಾ?

ಬೆಳಗಾವಿ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರೈತರ ಸಾಲ ಮರುರಚನೆ ಮಾಡಿ, 12…

22 hours ago