ಹವಾಮಾನ ವರದಿ | 24.10.2024 | ರಾಜ್ಯದ ಹಲವೆಡೆ ಸಾಮಾನ್ಯ ಮಳೆ ಸಾಧ್ಯತೆ

October 24, 2024
11:58 AM

25.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹೆಚ್ಚಿನ ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಆದರೆ ಗಾಳಿಯ ಪಾತ್ರ ಮಹತ್ವದ್ದು. ಉಡುಪಿ ಮಧ್ಯಾಹ್ನ ನಂತರ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಅ. 25ರಂದು ಘಟ್ಟದ ಕೆಳಗಿನ ಪ್ರದೇಶಗಳ ಒಂದೆರಡು ಕಡೆ ಸಣ್ಣ ಪ್ರಮಾಣದ ಮಳೆಯ ಸಾಧ್ಯತೆ ಇದ್ದು, 26ರಿಂದ ಮಳೆಯ ಸಾಧ್ಯತೆ ಕಾಣುತ್ತಿಲ್ಲ.

ಕೊಡಗು ಹೆಚ್ಚಿನ ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಹಾಸನ ಮಧ್ಯಾಹ್ನ ನಂತರ, ಸಂಜೆ ಅಲ್ಲಲ್ಲಿ ಗುಡುಗು ಸಹಿತ ಮಳೆ ಮತ್ತು ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಇರಲಿದ್ದು, ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಅ. 25ರಂದು ಮೋಡ ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದ್ದು, 26ರಿಂದ ಮಳೆಯ ಸಾಧ್ಯತೆ ಕಾಣುತ್ತಿಲ್ಲ.

ಉತ್ತರ ಒಳನಾಡಿನ ಭಾಗಗಳಲ್ಲಿ ಮಳೆಯ ಸಾಧ್ಯತೆ ಕ್ಷೀಣಿಸಿದೆ. ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಈಗಿನಂತೆ ಅ. 25ರಿಂದ ಮಳೆಯ ಸಾಧ್ಯತೆ ತೀರಾ ಕಡಿಮೆಯಾಗಲಿದೆ.

ಬಂಗಾಳಕೊಲ್ಲಿಯ ಡಾನಾ ಚಂಡಮಾರುತವು ಇಂದು ರಾತ್ರಿ ಒಡಿಸ್ಸಾ ಕರಾವಳಿಗೆ ಅಪ್ಪಳಿಸುವ ಸಾಧ್ಯತೆಗಳಿವೆ. ಅರಬ್ಬಿ ಸಮುದ್ರದ ತಿರುವಿಕೆಯ ಇನ್ನಷ್ಟು ಪಶ್ಚಿಮಕ್ಕೆ ಚಲಿಸುವ ಲಕ್ಷಣಗಳಿವೆ.

ಈಗಿನಂತೆ ಚಂಡಮಾರುತದ ಪ್ರಭಾವದಿಂದ ಹಿಂಗಾರು ಅತಿ ದುರ್ಬಲಗೊಂಡಿದ್ದು, ಈಗಿನ ವಾತಾವರಣದ ಅಧಿಕ ತಾಪಮಾನದಿಂದ ಸ್ಥಳೀಯವಾಗಿ ಉಂಟಾಗುವ ಮೋಡಗಳಿಂದ ಅ. 29ರಿಂದ ರಾಜ್ಯದ ಕರಾವಳಿ, ಮಲೆನಾಡು ಭಾಗಗಳಲ್ಲಿ ಮತ್ತು 30ರಿಂದ ಒಳನಾಡಿನ ಅಲ್ಲಲ್ಲಿ ಸಾಮಾನ್ಯ ಮಳೆ ಆರಂಭವಾಗುವ ಲಕ್ಷಣಗಳಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಅಡಿಕೆ ಎಲೆಚುಕ್ಕೆ ರೋಗ | ತಕ್ಷಣದ ಪರಿಹಾರಕ್ಕಿಂತ ವೈಜ್ಞಾನಿಕ ನಿರ್ವಹಣೆ ಮುಖ್ಯ | 3 ವರ್ಷದ ಅಧ್ಯಯನದ ಬಳಿಕವೇ ಅಂತಿಮ ಪರಿಹಾರ
April 7, 2026
11:25 AM
by: ಮಹೇಶ್ ಪುಚ್ಚಪ್ಪಾಡಿ
ಸರ್ಕಾರದ ಸೌಲಭ್ಯಕ್ಕೆ ‘ಫ್ರೂಟ್ಸ್ ಐಡಿ’ ಕಡ್ಡಾಯ | ರೈತರಿಗೆ ಸೂಚನೆ
April 7, 2026
7:41 AM
by: ಮಿರರ್‌ ಡೆಸ್ಕ್
ಗದಗ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ತಾಪಮಾನ | ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ ಜಿಲ್ಲಾಧಿಕಾರಿ
April 7, 2026
7:34 AM
by: ಮಿರರ್‌ ಡೆಸ್ಕ್
ಅಡಿಕೆ ಎಲೆ ಚುಕ್ಕಿ ರೋಗ ನಿರ್ವಹಣೆ | ಗುತ್ತಿಗಾರಿನ ಪ್ರಾತ್ಯಕ್ಷಿಕೆ ತೋಟಕ್ಕೆ ಸಿಪಿಸಿಆರ್‌ಐ ನಿರ್ದೇಶಕರ ಭೇಟಿ | ವೈಜ್ಞಾನಿಕ ಕ್ರಮಗಳು ರೈತರಿಗೆ ಆಶಾಕಿರಣ
April 6, 2026
7:32 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror