Advertisement
ವೆದರ್ ಮಿರರ್

ಹವಾಮಾನ ವರದಿ | 26.10.2024 | ರಾಜ್ಯದ ಹಲವೆಡೆ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ

Share
27.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಕಾಸರಗೋಡಿನ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದ್ದು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳ ಒಂದೆರಡು ಕಡೆ ಗುಡುಗು ಸಹಿತ ತುಂತುರು ಮಳೆಯ ಸಾಧ್ಯತೆಯೂ ಇದೆ. ಈಗಿನಂತೆ ಈ ರೀತಿಯ ವಾತಾವರಣವು ಒಕ್ಟೊಬರ್ ಕೊನೆಯ ತನಕವೂ ಮುಂದುವರಿಯುವ ಸಾಧ್ಯತೆಗಳಿವೆ.
ಕೊಡಗಿನ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳ ಒಂದೆರಡು ಕಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣ ಇರಲಿದ್ದು, ಚಿಕ್ಕಮಗಳೂರಿನ ಕರಾವಳಿ ಜಿಲ್ಲೆಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಒಂದೆರಡು ಕಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆ ಇದೆ.
ಈಗಿನಂತೆ ಒಕ್ಟೊಬರ್ 30ರಿಂದ ಮಳೆ ಹೆಚ್ಚಾಗುವ ಲಕ್ಷಣಗಳಿದ್ದು, ನವೆಂಬರ್ ಮೊದಲ ವಾರದಲ್ಲಿಯೂ ಮಳೆ ಮುಂದುವರಿಯುವ ಸಂಭವವಿದೆ.
ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದ್ದು, ನವೆಂಬರ್ 1ರಿಂದ ಮತ್ತೆ ಮಳೆ ಆರಂಭವಾಗುವ ಲಕ್ಷಣಗಳಿವೆ.
ಡಾನಾ ಚಂಡಮಾರುತ ಸಂಪೂರ್ಣ ಶಿಥಿಲಗೊಂಡ ನಂತರ ಈಗ ಉತ್ತರ ಭಾರತ ಕಡೆಯಿಂದ ಬೀಸುತ್ತಿರುವ ಶುಷ್ಕ ಗಾಳಿಯ ಪ್ರಮಾಣವೂ ಕಡಿಮೆಯಾಗಲಿದ್ದು, ನ. 1ರಿಂದ ರಾಜ್ಯದಾದ್ಯಂತ ಹಿಂಗಾರು ರೂಪದ  ಮಳೆ ಆರಂಭವಾಗುವ ಸಾಧ್ಯತೆಗಳಿವೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

6 hours ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

6 hours ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

1 day ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

2 days ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

3 days ago