29.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಜೊತೆಗೆ ಒಣ ಹವೆ ಮುಂದುವರಿಯುವ ಮುನ್ಸೂಚನೆ ಇದೆ.
ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಹಗುರ ಮೋಡದ ವಾತಾವರಣ ಇರಲಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ಒಣಹವೆ ಮುಂದುವರಿಯಲಿದೆ.
ಉತ್ತರ ಒಳನಾಡು ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದ್ದು, ದಕ್ಷಿಣ ಒಳನಾಡಿನಲ್ಲಿ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ನ.30ರಂದು ಉತ್ತರ ತಮಿಳುನಾಡು ಕರಾವಳಿ ಮೂಲಕ ಭೂ ಪ್ರವೇಶಿಸುವ ಸಾಧ್ಯತೆಗಳಿದ್ದು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಮೂಲಕ ನ. 30ರಂದು ರಾಜ್ಯಕ್ಕೆ ಆಗಮಿಸುವ ನಿರೀಕ್ಷೆ ಇದೆ.
ಇದರ ಪರಿಣಾಮದಿಂದ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ನಗರ ಹಾಗೂ ಗ್ರಾಮಾಂತರ, ರಾಮನಗರ, ಚಾಮರಾಜನಗರ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ನ. 30ರಿಂದ ಉತ್ತಮ ಮಳೆ ಆರಂಭವಾಗುವ ಮುನ್ಸೂಚನೆ ಇದೆ.
ಡಿ. 1ರಿಂದ ಉಳಿದ ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮಳೆ ಆರಂಭವಾಗುವ ನಿರೀಕ್ಷೆ ಇದೆ. ಈಗಿನಂತೆ ಉತ್ತರ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮೋಡದ ಜೊತೆಗೆ ಒಣ ಹವೆ ಮುಂದುವರಿಯುವ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶ ಸೇರಿದಂತೆ ಅಲ್ಲಲ್ಲಿ…
ತುಳುನಾಡಿನ ವಿವಿದೆಡೆ ವಿಷ್ಣುಮೂರ್ತಿ ದೈವದ ನೇಮ, ಒತ್ತೆಕೋಲ ನಡೆಯುತ್ತದೆ. ಈ ಆಚರಣೆಯ ಹಿಂದಿರುವ…
ಪಟ್ಟೆ ವಿದ್ಯಾ ಸಮಿತಿ (ರಿ)ಯಿಂದ ನಡೆಸಲ್ಪಡುವ ಪ್ರತಿಭಾ ಪ್ರೌಢ ಶಾಲೆ ಪಟ್ಟೆ ಹಾಗೂ…
ಪುತ್ತೂರು ಮೂಲದ 81+ ವರ್ಷ ಪರಂಪರೆಯ ಮುಳಿಯ ಜ್ಯುವೆಲ್ಸ್ ಇನ್ನು ಮುಂದೆ ಹೊಸ…
ಗುಜ್ಜೆ ಶೇಂಗಾ ಮಸಾಲಾ ಪಲ್ಯಕ್ಕೆ ಬೇಕಾಗುವ ವಸ್ತುಗಳು ಹಾಗೂ ಮಾಡುವ ವಿಧಾನ :…
ಅಡಿಕೆ ಮರದ ಜೊತೆಗೂ ಕಾಫಿ ಬೆಳೆ ಅನುಕೂಲಕರವಾಗಿದೆ. ಹೀಗಾಗಿ ಅಡಿಕೆ ಬೆಳೆಗಾರರು ಉಪ…