ಹವಾಮಾನ ವರದಿ | 29.11.2024 | ರಾಜ್ಯದಲ್ಲಿ ಒಣಹವೆ | ಡಿಸೆಂಬರ್‌ ಮೊದಲ ವಾರ ಮಳೆ ಸಾಧ್ಯತೆ |

November 29, 2024
12:32 PM

30.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ, ಮಲೆನಾಡು ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಬಂಗಾಳಕೊಲ್ಲಿಯ ಚಂಡಮಾರುತದ (ಪೆಂಗಾಲ್) ಪ್ರಭಾವದಿಂದ ಉತ್ತರ ಭಾರತ ಕಡೆಯಿಂದ ಶುಶ್ಕ ಹಾಗೂ ಶೀತ ಗಾಳಿ ಸೆಳೆಯಲ್ಪಡುತ್ತಿರುವುದರಿಂದ ಉತ್ತಮ ಛಳಿಯ ವಾತಾವರಣ ಸೃಷ್ಟಿಯಾಗಿದೆ. ಈ ಚಂಡಮಾರುತವು ನ. 30ರಂದು ಉತ್ತರ ತಮಿಳುನಾಡು ಕರಾವಳಿಯ ಮೂಲಕ ಭೂ ಪ್ರವೇಶಿಸುತ್ತಿದ್ದಂತೆಯೆ ರಾಜ್ಯದಲ್ಲಿ ಛಳಿಯ ವಾತಾವರಣವು ಕಡಿಮೆಯಾಗಿ ಮಳೆ ಆರಂಭವಾಗುವ ಮುನ್ಸೂಚನೆ ಇದೆ.

ಡಿ.2 ಅಥವಾ 3ರಂದು ಚಂಡಮಾರುತವು ಕೇರಳದ ಕಾಸರಗೋಡು ಹಾಗೂ ಕಣ್ಣೂರು ಮಧ್ಯೆ ಅರಬ್ಬಿ ಸಮುದ್ರಕ್ಕೆ ಪ್ರವೇಶಿಸುವ ಸಾಧ್ಯತೆ ಇದೆ. ಈ ಚಂಡಮಾರುತವು ಅರಬ್ಬಿ ಸಮುದ್ರದಲ್ಲಿ ಇರುವಷ್ಟು ಸಮಯವೂ ( ಬಂಗಾಳಕೊಲ್ಲಿ ಕಡೆಯಿಂದ ಗಾಳಿ ಸೆಳೆಯಲ್ಪಡುವುದರಿಂದ) ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಹಿಂಗಾರು ರೀತಿಯ ಮಳೆ ಮುಂದುವರಿಯುವ ಸಾಧ್ಯತೆಗಳಿವೆ. ಸುಮಾರು ಡಿಸೆಂಬರ್ ಮೊದಲ ವಾರ ಪೂರ್ತಿ ಮಳೆಯ ಸಾಧ್ಯತೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!
March 4, 2026
12:01 PM
by: ಮಿರರ್‌ ಡೆಸ್ಕ್
ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ
March 4, 2026
10:56 AM
by: ಮಿರರ್‌ ಡೆಸ್ಕ್
ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ
March 4, 2026
7:27 AM
by: ದ ರೂರಲ್ ಮಿರರ್.ಕಾಂ
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು
March 3, 2026
10:34 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror