30.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ, ಮಲೆನಾಡು ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಬಂಗಾಳಕೊಲ್ಲಿಯ ಚಂಡಮಾರುತದ (ಪೆಂಗಾಲ್) ಪ್ರಭಾವದಿಂದ ಉತ್ತರ ಭಾರತ ಕಡೆಯಿಂದ ಶುಶ್ಕ ಹಾಗೂ ಶೀತ ಗಾಳಿ ಸೆಳೆಯಲ್ಪಡುತ್ತಿರುವುದರಿಂದ ಉತ್ತಮ ಛಳಿಯ ವಾತಾವರಣ ಸೃಷ್ಟಿಯಾಗಿದೆ. ಈ ಚಂಡಮಾರುತವು ನ. 30ರಂದು ಉತ್ತರ ತಮಿಳುನಾಡು ಕರಾವಳಿಯ ಮೂಲಕ ಭೂ ಪ್ರವೇಶಿಸುತ್ತಿದ್ದಂತೆಯೆ ರಾಜ್ಯದಲ್ಲಿ ಛಳಿಯ ವಾತಾವರಣವು ಕಡಿಮೆಯಾಗಿ ಮಳೆ ಆರಂಭವಾಗುವ ಮುನ್ಸೂಚನೆ ಇದೆ.
ಡಿ.2 ಅಥವಾ 3ರಂದು ಚಂಡಮಾರುತವು ಕೇರಳದ ಕಾಸರಗೋಡು ಹಾಗೂ ಕಣ್ಣೂರು ಮಧ್ಯೆ ಅರಬ್ಬಿ ಸಮುದ್ರಕ್ಕೆ ಪ್ರವೇಶಿಸುವ ಸಾಧ್ಯತೆ ಇದೆ. ಈ ಚಂಡಮಾರುತವು ಅರಬ್ಬಿ ಸಮುದ್ರದಲ್ಲಿ ಇರುವಷ್ಟು ಸಮಯವೂ ( ಬಂಗಾಳಕೊಲ್ಲಿ ಕಡೆಯಿಂದ ಗಾಳಿ ಸೆಳೆಯಲ್ಪಡುವುದರಿಂದ) ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಹಿಂಗಾರು ರೀತಿಯ ಮಳೆ ಮುಂದುವರಿಯುವ ಸಾಧ್ಯತೆಗಳಿವೆ. ಸುಮಾರು ಡಿಸೆಂಬರ್ ಮೊದಲ ವಾರ ಪೂರ್ತಿ ಮಳೆಯ ಸಾಧ್ಯತೆ ಇದೆ.ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…
ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…