30.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ, ಮಲೆನಾಡು ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಬಂಗಾಳಕೊಲ್ಲಿಯ ಚಂಡಮಾರುತದ (ಪೆಂಗಾಲ್) ಪ್ರಭಾವದಿಂದ ಉತ್ತರ ಭಾರತ ಕಡೆಯಿಂದ ಶುಶ್ಕ ಹಾಗೂ ಶೀತ ಗಾಳಿ ಸೆಳೆಯಲ್ಪಡುತ್ತಿರುವುದರಿಂದ ಉತ್ತಮ ಛಳಿಯ ವಾತಾವರಣ ಸೃಷ್ಟಿಯಾಗಿದೆ. ಈ ಚಂಡಮಾರುತವು ನ. 30ರಂದು ಉತ್ತರ ತಮಿಳುನಾಡು ಕರಾವಳಿಯ ಮೂಲಕ ಭೂ ಪ್ರವೇಶಿಸುತ್ತಿದ್ದಂತೆಯೆ ರಾಜ್ಯದಲ್ಲಿ ಛಳಿಯ ವಾತಾವರಣವು ಕಡಿಮೆಯಾಗಿ ಮಳೆ ಆರಂಭವಾಗುವ ಮುನ್ಸೂಚನೆ ಇದೆ.
ಡಿ.2 ಅಥವಾ 3ರಂದು ಚಂಡಮಾರುತವು ಕೇರಳದ ಕಾಸರಗೋಡು ಹಾಗೂ ಕಣ್ಣೂರು ಮಧ್ಯೆ ಅರಬ್ಬಿ ಸಮುದ್ರಕ್ಕೆ ಪ್ರವೇಶಿಸುವ ಸಾಧ್ಯತೆ ಇದೆ. ಈ ಚಂಡಮಾರುತವು ಅರಬ್ಬಿ ಸಮುದ್ರದಲ್ಲಿ ಇರುವಷ್ಟು ಸಮಯವೂ ( ಬಂಗಾಳಕೊಲ್ಲಿ ಕಡೆಯಿಂದ ಗಾಳಿ ಸೆಳೆಯಲ್ಪಡುವುದರಿಂದ) ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಹಿಂಗಾರು ರೀತಿಯ ಮಳೆ ಮುಂದುವರಿಯುವ ಸಾಧ್ಯತೆಗಳಿವೆ. ಸುಮಾರು ಡಿಸೆಂಬರ್ ಮೊದಲ ವಾರ ಪೂರ್ತಿ ಮಳೆಯ ಸಾಧ್ಯತೆ ಇದೆ.ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…
ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…