05.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡದ ವಾತಾವರಣದೊಂದಿಗೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಭಾಗಗಳಲ್ಲಿ ಈಗಾಗಲೇ ಮುಂಜಾನೆ ಅಲ್ಲಲ್ಲಿ ಮಳೆಯಾಗಿದ್ದರಿಂದ ಇನ್ನು ಇವತ್ತು ಮಳೆಯ ಸಾಧ್ಯತೆ ಕಡಿಮೆ ಇರಬಹುದು. ಈಗಿನಂತೆ ಡಿ. 9ರ ತನಕವೂ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಕೊಡಗು ಜಿಲ್ಲೆಯಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಆದರೆ ಮುಂಜಾನೆ ಅಲ್ಲಲ್ಲಿ ಮಳೆಯಾಗಿದ್ದರಿಂದ ಇವತ್ತು ಇನ್ನು ಸಾಧ್ಯತೆ ಕಡಿಮೆ ಇರಬಹುದು.
ಉತ್ತರ ಒಳನಾಡಿನ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ರಾಯಚೂರು ಜಿಲ್ಲೆಯ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಮಾತ್ರ ಇರಬಹುದು. ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಡಿ. 7ರ ತನಕ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆಗಳಿವೆ.
ಫೆಂಗಲ್ ಚಂಡಮಾರುತವು ಮತ್ತಷ್ಟು ಪಶ್ಚಿಮಕ್ಕೆ ಚಲಿಸಿರುವುದರಿಂದ ಅದರ ನೇರ ಪ್ರಭಾವ ಕಡಿಮೆಯಾದರೂ ಬಂಗಾಳಕೊಲ್ಲಿಯ ಕಡೆಯಿಂದ ಮಾರುತಗಳನ್ನು ಸೆಳೆಯುವುದರಿಂದ ರಾಜ್ಯದಲ್ಲಿ ಮಳೆ ಮುಂದುವರಿಯುವ ಸಾಧ್ಯತೆಗಳಿವೆ.
ಡಿ. 7ರ ಸುಮಾರಿಗೆ ನಿಕೋಬಾರ್ ಕರಾವಳಿಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿವೆ. ಪರಿಸ್ಥಿತಿ ಮತ್ತು ಪರಿಣಾಮ ಕಾದು ನೋಡಬೇಕಾಗಿದೆ.
ಭಾರತದ ಈಶಾನ್ಯ ರಾಜ್ಯಗಳಲ್ಲಿ ರಬ್ಬರ್ ಬೆಳೆ ವಿಸ್ತರಣೆಯಾಗುತ್ತಿದೆ. ಸುಮಾರು 2 ಲಕ್ಷ ಹೆಕ್ಟೇರ್…
ಅಡಿಕೆ ಮತ್ತು ಮಾನವರ ಆರೋಗ್ಯದ ಕುರಿತು ಪುರಾವೆ ಆಧಾರಿತ ಸಂಶೋಧನೆ” ನಡೆಸಲು ನಿರ್ಧರಿಸಿರುವ…
ಕೃಷಿಯಲ್ಲಿ ತಂತ್ರಜ್ಞಾನವನ್ನು ಅಗತ್ಯಕ್ಕೆ ತಕ್ಕಂತೆ ಬಳಸಿಕೊಳ್ಳುವ ಮೂಲಕ ಅದರ ಪ್ರಯೋಜನ ರೈತರಿಗೆ ಸಿಗುವಂತೆ…
ರಾಜ್ಯ ಸರ್ಕಾರವು ಸಾರ್ವಜನಿಕರಿಗೆ ಸುಲಭವಾಗಿ ಮತ್ತು ಕೈಗೆಟುಕುವ ದರಗಳಲ್ಲಿ ಮರಳು ಸಿಗಲಿ ಎಂಬ…
ಲಿವ್-ಇನ್-ರಿಲೇಶನ್ಶಿಪ್ ಎಂಬುದು ಇಬ್ಬರದೇ ನಿರ್ಧಾರವಾದರೂ ಅದಕ್ಕೆ ಕಾನೂನಿನ ರಕ್ಷಣೆ ಇರಬೇಕು. ಅಂದರೆ ಅದನ್ನು…
"ಅಡಿಕೆಯ ಕುರಿತು ವೈಜ್ಞಾನಿಕ ಸಂಶೋಧನೆ ಮತ್ತು ಮಾನವ ಆರೋಗ್ಯ" ಎಂಬ ಶೀರ್ಷಿಕೆಯಲ್ಲಿ ಅಧ್ಯಯನವನ್ನು…