08.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಸುಳ್ಯ, ಕಡಬ ತಾಲೂಕುಗಳಲ್ಲಿ ಸ್ವಲ್ಪ ಕಡಿಮೆ ಇರಬಹುದು. ಉಡುಪಿ ಸಾಮಾನ್ಯ ಹಾಗೂ ಉತ್ತರ ಕನ್ನಡ ಅಲ್ಲಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಡಿ.11ರ ತನಕವೂ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಕೊಡಗು ಮೋಡ ಹಾಗೂ ಒಂದೆರಡು ಕಡೆ ತುಂತುರು ಮುನ್ಸೂಚನೆ ಇದ್ದು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಡಿ.10ರ ತನಕ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಉತ್ತರ ಒಳನಾಡಿನ ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ವಿಜಯಪುರ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ನಿಕೋಬಾರ್ ಕರಾವಳಿಲ್ಲಿ ಉಂಟಾಗಿದ್ದ ವಾಯುಭಾರ ಕುಸಿತವು ಡಿ.11 ಅಥವಾ 12ರ ಸುಮಾರಿಗೆ ಶ್ರೀಲಂಕಾ ಕರಾವಳಿ ಮೂಲಕ ತಮಿಳುನಾಡು ಕರಾವಳಿಗೆ ತಲಪುವ ನಿರೀಕ್ಷೆಯಿದೆ. ಪರಿಣಾಮವನ್ನು ಕಾದು ನೋಡಬೇಕಾಗಿದೆ.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…