Advertisement
ವೆದರ್ ಮಿರರ್

ಹವಾಮಾನ ವರದಿ | 07.12.2024 | ಕೆಲವು ಕಡೆ ಮಳೆ ಸಾಧ್ಯತೆ | ಇನ್ನೊಂದು ವಾಯುಭಾರ ಕುಸಿತ ಲಕ್ಷಣ

Share

08.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಸುಳ್ಯ, ಕಡಬ ತಾಲೂಕುಗಳಲ್ಲಿ ಸ್ವಲ್ಪ ಕಡಿಮೆ ಇರಬಹುದು. ಉಡುಪಿ ಸಾಮಾನ್ಯ ಹಾಗೂ ಉತ್ತರ ಕನ್ನಡ ಅಲ್ಲಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಡಿ.11ರ ತನಕವೂ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಕೊಡಗು ಮೋಡ ಹಾಗೂ ಒಂದೆರಡು ಕಡೆ ತುಂತುರು ಮುನ್ಸೂಚನೆ ಇದ್ದು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಡಿ.10ರ ತನಕ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಉತ್ತರ ಒಳನಾಡಿನ ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ವಿಜಯಪುರ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ ಹಾಗೂ ನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಉತ್ತರ ಒಳನಾಡು ಭಾಗಗಳಲ್ಲಿ ಡಿ. 8ರತನಕ ಮಳೆ ಮುಂದುವರಿಯುವ ಲಕ್ಷಣಗಳಿವೆ. ದಕ್ಷಿಣ ಒಳನಾಡು ಭಾಗಗಳಲ್ಲಿ ಈಗಾಗಲೇ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಡಿ. 13ರಿಂದ ಮತ್ತೆ ಚುರುಕಾಗುವ ಸಾಧ್ಯತೆಗಳಿವೆ.

ನಿಕೋಬಾರ್ ಕರಾವಳಿಲ್ಲಿ ಉಂಟಾಗಿದ್ದ ವಾಯುಭಾರ ಕುಸಿತವು ಡಿ.11 ಅಥವಾ 12ರ ಸುಮಾರಿಗೆ ಶ್ರೀಲಂಕಾ ಕರಾವಳಿ ಮೂಲಕ ತಮಿಳುನಾಡು ಕರಾವಳಿಗೆ ತಲಪುವ ನಿರೀಕ್ಷೆಯಿದೆ. ಪರಿಣಾಮವನ್ನು ಕಾದು ನೋಡಬೇಕಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ರಾಜ್ಯದಲ್ಲಿ ನೈಋತ್ಯ ಮುಂಗಾರು ಸಕ್ರಿಯ ; ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಭಾರೀ ಮಳೆ

ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ…

5 hours ago

ರಾಜ್ಯದಲ್ಲಿ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ: ಇಂಧನ ಸಚಿವ ಕೆ.ಜೆ.ಜಾರ್ಜ್

ರಾಜ್ಯದಲ್ಲಿ ಸದ್ಯ ಯಾವುದೇ ರೀತಿಯ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ ಎಂದು ಇಂಧನ ಸಚಿವ…

5 hours ago

ನವೋದಯ ವಿದ್ಯಾಲಯದ 9, 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ – ಅ.15 ಕೊನೆಯ ದಿನ

2027-28ನೇ ಸಾಲಿನಲ್ಲಿ ನವೋದಯ ವಿದ್ಯಾಲಯಗಳ 9 ಮತ್ತು 11ನೇ ತರಗತಿಯ ಖಾಲಿ ಸ್ಥಾನಗಳಿಗೆ…

5 hours ago

1973 ರ ಅಡಿಕೆ ಬಿಕ್ಕಟ್ಟು 2026ಕ್ಕೆ ನೀಡುವ ಎಚ್ಚರಿಕೆ ಏನು..?

1973ರ ಅಡಿಕೆ ಮಾರುಕಟ್ಟೆ ಬಿಕ್ಕಟ್ಟು ಉತ್ಪಾದನೆ ಹೆಚ್ಚಳಕ್ಕೆ ತಕ್ಕಂತೆ ಮಾರುಕಟ್ಟೆ ಹೀರಿಕೊಳ್ಳುವ ಸಾಮರ್ಥ್ಯವೂ…

15 hours ago

ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?

ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…

24 hours ago

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?

ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…

2 days ago