09.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ, ಸಂಜೆ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಈಗಿನಂತೆ ಡಿ. 10ರಿಂದ 12ರ ತನಕ ಮಳೆ ಕಡಿಮೆಯಾಗಲಿದ್ದು 13 ಹಾಗೂ 14ರಂದು ವಾಯುಭಾರ ಕುಸಿತದ ಉತ್ತಮ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಕಡಿಮೆ ಇರಬಹುದು.
ಕೊಡಗಿನ ಅಲ್ಲಲ್ಲಿ ಮಧ್ಯಾಹ್ನ ನಂತರ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನದ ಸಕಲೇಶ್ಪುರ ಸುತ್ತಮುತ್ತ ಭಾಗಗಳಲ್ಲಿ ತುಂತುರು ಮಳೆಯ ಸಾಧ್ಯತೆಗಳಿದ್ದು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿಯೂ ಗುಡುಗಿನೊಂದಿಗೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಡಿ. 10 ಹಾಗೂ 11ರಂದು ಬಿಡುವು ಪಡೆವ ಮಳೆಯು 12ರಿಂದ 14ರ ತನಕ ವಾಯುಭಾರ ಕುಸಿತದ ಮಳೆಯ ಮುನ್ಸೂಚನೆ ಇದೆ. 15ರಿಂದ ಮತ್ತೆ ಮಳೆ ಕಡಿಮೆಯಾಗಲಿದೆ.ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಕಲಬುರ್ಗಿ, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಉತ್ತರ ಒಳನಾಡಿನಲ್ಲಿ ಡಿ.10ರ ತನಕ ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿದ್ದು, ನಂತರ ಬಿಡುವು ಪಡೆಯಬಹುದು. ಡಿ. 13ರಿಂದ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ವಾಯುಭಾರ ಕುಸಿತದ ಪರಿಣಾಮ ಅಷ್ಟೇನು ಗೋಚರಿಸುತ್ತಿಲ್ಲ. ದಕ್ಷಿಣ ಒಳನಾಡಿನಲ್ಲಿ ಈಗಾಗಲೇ ಮಳೆ ಕಡಿಮೆಯಾಗಿದ್ದು, ಡಿ. 12 ಹಾಗೂ 13ರಂದು ಬಹುತೇಕ ಭಾಗಗಳಲ್ಲಿ ವಾಯುಭಾರ ಕುಸಿತದ ಮಳೆಯ ಮುನ್ಸೂಚನೆ ಇದೆ.ಬಂಗಾಳಕೊಲ್ಲಿಯ ವಾಯುಭಾರ ಕುಸಿತವು (ನಿಮ್ನತೆ 1005hpa) ಶ್ರೀಲಂಕಾ ಬಳಿ ತಲುಪಿದ್ದು ಡಿ. 11ರಂದು ತಮಿಳುನಾಡು ಕರಾವಳಿಗೆ ಅಪ್ಪಳಿಸುವ ನಿರೀಕ್ಷೆ ಇದೆ. ಚಂಡಮಾರುತವಾಗುವ ಸಾಧ್ಯತೆಗಳು ಕಡಿಮೆ. ಡಿ.14ರಂದು ಅರಬ್ಬಿ ಸಮುದ್ರಕ್ಕೆ ಪ್ರವೇಶಿಸುವ ಸಾಧ್ಯತೆಗಳಿವೆ. ಇದರ ಜೊತೆಗೆ ಇನ್ನೆರಡು ವಾಯುಭಾರ ಕುಸಿತ ಇದೇ ಹಾದಿಯಲ್ಲಿ ಬರುವ ನಿರೀಕ್ಷೆ ಇದೆ.
ಅಂತೂ ಡಿಸೆಂಬರ್ ತಿಂಗಳ ಬಹುತೇಕ ದಿನಗಳಲ್ಲಿ ರಾಜ್ಯದಲ್ಲಿ ಮಳೆಯ ಮುನ್ಸೂಚನೆ ಇದೆ.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…