Advertisement
ವೆದರ್ ಮಿರರ್

ಹವಾಮಾನ ವರದಿ | 08.12.2024| ರಾಜ್ಯದ ಕೆಲವು ಕಡೆ ಇಂದೂ ಮಳೆ | ಡಿಸೆಂಬರ್‌ ಅಂತ್ಯದವರೆಗೂ ಆಗಾಗ ಮಳೆ..?

Share

09.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ, ಸಂಜೆ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಈಗಿನಂತೆ ಡಿ. 10ರಿಂದ 12ರ ತನಕ ಮಳೆ ಕಡಿಮೆಯಾಗಲಿದ್ದು 13 ಹಾಗೂ 14ರಂದು ವಾಯುಭಾರ ಕುಸಿತದ ಉತ್ತಮ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಕಡಿಮೆ ಇರಬಹುದು.

ಕೊಡಗಿನ ಅಲ್ಲಲ್ಲಿ ಮಧ್ಯಾಹ್ನ ನಂತರ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನದ ಸಕಲೇಶ್ಪುರ ಸುತ್ತಮುತ್ತ ಭಾಗಗಳಲ್ಲಿ ತುಂತುರು ಮಳೆಯ ಸಾಧ್ಯತೆಗಳಿದ್ದು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿಯೂ ಗುಡುಗಿನೊಂದಿಗೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಈಗಿನಂತೆ ಡಿ. 10 ಹಾಗೂ 11ರಂದು ಬಿಡುವು ಪಡೆವ ಮಳೆಯು 12ರಿಂದ 14ರ ತನಕ ವಾಯುಭಾರ ಕುಸಿತದ ಮಳೆಯ ಮುನ್ಸೂಚನೆ ಇದೆ. 15ರಿಂದ ಮತ್ತೆ ಮಳೆ ಕಡಿಮೆಯಾಗಲಿದೆ.

ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಕಲಬುರ್ಗಿ, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಈಗಿನಂತೆ ಉತ್ತರ ಒಳನಾಡಿನಲ್ಲಿ ಡಿ.10ರ ತನಕ ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿದ್ದು, ನಂತರ ಬಿಡುವು ಪಡೆಯಬಹುದು. ಡಿ. 13ರಿಂದ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ವಾಯುಭಾರ ಕುಸಿತದ ಪರಿಣಾಮ ಅಷ್ಟೇನು ಗೋಚರಿಸುತ್ತಿಲ್ಲ. ದಕ್ಷಿಣ ಒಳನಾಡಿನಲ್ಲಿ ಈಗಾಗಲೇ ಮಳೆ ಕಡಿಮೆಯಾಗಿದ್ದು, ಡಿ. 12 ಹಾಗೂ 13ರಂದು ಬಹುತೇಕ ಭಾಗಗಳಲ್ಲಿ ವಾಯುಭಾರ ಕುಸಿತದ ಮಳೆಯ ಮುನ್ಸೂಚನೆ ಇದೆ.

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು (ನಿಮ್ನತೆ 1005hpa) ಶ್ರೀಲಂಕಾ ಬಳಿ ತಲುಪಿದ್ದು ಡಿ. 11ರಂದು ತಮಿಳುನಾಡು ಕರಾವಳಿಗೆ ಅಪ್ಪಳಿಸುವ ನಿರೀಕ್ಷೆ ಇದೆ. ಚಂಡಮಾರುತವಾಗುವ ಸಾಧ್ಯತೆಗಳು ಕಡಿಮೆ. ಡಿ.14ರಂದು ಅರಬ್ಬಿ ಸಮುದ್ರಕ್ಕೆ ಪ್ರವೇಶಿಸುವ ಸಾಧ್ಯತೆಗಳಿವೆ. ಇದರ ಜೊತೆಗೆ ಇನ್ನೆರಡು ವಾಯುಭಾರ ಕುಸಿತ ಇದೇ ಹಾದಿಯಲ್ಲಿ ಬರುವ ನಿರೀಕ್ಷೆ ಇದೆ.
ಅಂತೂ ಡಿಸೆಂಬರ್ ತಿಂಗಳ ಬಹುತೇಕ ದಿನಗಳಲ್ಲಿ ರಾಜ್ಯದಲ್ಲಿ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಮುರಸು ಚಂಡಮಾರುತ – ದಕ್ಷಿಣ ಭಾರತದಲ್ಲಿ ಭಾರಿ ಮಳೆ ಮುನ್ಸೂಚನೆ

ಆಂಧ್ರಪ್ರದೇಶದ ದಕ್ಷಿಣ ಕರಾವಳಿ ಭಾಗದಲ್ಲಿ ಪ್ರಭಾವ ಬೀರಿದ್ದ ಮುರಸು ಚಂಡಮಾರುತ ಉತ್ತರ ವಾಯವ್ಯ…

7 hours ago

ನಾಗಪುರದ ಅಡಿಕೆ ವ್ಯಾಪಾರಿ ಡಿಆರ್‌ಐ ವಶಕ್ಕೆ – ₹35 ಕೋಟಿ ಅಕ್ರಮ ಆಮದು ಪ್ರಕರಣದ ತನಿಖೆ ಚುರುಕು

₹35 ಕೋಟಿ ಮೌಲ್ಯದ ಅಡಿಕೆ ಅಕ್ರಮ ಆಮದು ಮತ್ತು ಕಸ್ಟಮ್ಸ್ ಸುಂಕ ವಂಚನೆ…

7 hours ago

1,000 ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳ ಜೊತೆ ಜೋಡಣೆ

ರಾಜ್ಯದ ಒಂದು ಸಾವಿರ ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳ ಜೊತೆ ಜೋಡಿಸುವ ಗುರಿಯನ್ನು…

7 hours ago

ಹವಾಮಾನ ವರದಿ | 04-11-2026 | ನ.8ರ ಬಳಿಕ ಚಳಿ ಹೆಚ್ಚಳದ ಸೂಚನೆ – ಉತ್ತರ ಒಳನಾಡಿನಲ್ಲಿ 10 ದಿನ ಮಳೆಯಿಲ್ಲವೇ?

ಕರಾವಳಿ ಮತ್ತು ಮಲೆನಾಡಿನಲ್ಲಿ ನವೆಂಬರ್ 8ರವರೆಗೆ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಒಳನಾಡಿನ…

15 hours ago

ಸಕ್ಕರೆ ಕಾರ್ಖಾನೆ ಮಾಲೀಕರು–ಕಬ್ಬು ಬೆಳೆಗಾರರ ಸಭೆ ವಿಫಲ: ಬೆಳಗಾವಿಯಲ್ಲಿ ಮುಂದುವರಿದ ರೈತರ ಪ್ರತಿಭಟನೆ

ಕಬ್ಬಿನ ಬೆಲೆ ನಿಗದಿ ವಿಚಾರವಾಗಿ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆ…

17 hours ago

ಪರಸ್ಪರರ ಹೊಲಗಳಲ್ಲಿ ಕೆಲಸ ಮಾಡಿದ ರೈತರು -13 ರೈತ ಗುಂಪುಗಳಿಂದ ₹21 ಲಕ್ಷಕ್ಕೂ ಅಧಿಕ ಕೂಲಿ ವೆಚ್ಚ ಉಳಿತಾಯ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ 13 ರೈತ ಗುಂಪುಗಳು ಪರಸ್ಪರರ ಹೊಲಗಳಲ್ಲಿ ಸರದಿಯಂತೆ ಕೆಲಸ…

2 days ago