Advertisement
ವೆದರ್ ಮಿರರ್

ಹವಾಮಾನ ವರದಿ | 10.12.2024 | ರಾಜ್ಯದ ಕೆಲವೆಡೆ ಇಂದೂ ಮಳೆ ಸಾಧ್ಯತೆ | ಡಿ.16ರಿಂದ ವಾಯುಭಾರ ಕುಸಿತ| ಮತ್ತೆ ಮಳೆ ಸಾಧ್ಯತೆ

Share

11.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ತುಂತುರು ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ.

ಈಗಿನಂತೆ ಡಿ. 11ರಂದು ಮಳೆಯ ಸಾಧ್ಯತೆ ಕಡಿಮೆ ಇದ್ದು, 12 ಹಾಗೂ 13ರಂದು ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ವಾಯುಭಾರ ಕುಸಿತದ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ನಂತರ ಬಿಡುವು ಪಡೆದರೂ ಡಿ. 16ರಿಂದ ವಾಯುಭಾರ ಕುಸಿತದ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಡಿ. 12 ಹಾಗೂ 13ರಂದು ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ವಾಯುಭಾರ ಕುಸಿತದ ಮಳೆಯ ಮುನ್ಸೂಚನೆ ಇದೆ. ನಂತರ ಕಡಿಮೆಯಾಗಲಿದ್ದು, ಡಿ. 16ರಿಂದ ಇನ್ನೊಂದು ವಾಯುಭಾರ ಕುಸಿತದ ಮಳೆ ಮುಂದುವರಿಯುವ ಮುನ್ಸೂಚನೆ ಇದೆ.

ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಅಲ್ಲಲ್ಲಿ ಹಗುರ ಮೋಡದ ಸಾಧ್ಯತೆಯೂ ಇದೆ. ಈಗಿನಂತೆ ಡಿ.11ರಂದು ಕರ್ನಾಟಕ ತಮಿಳುನಾಡು ಗಡಿ ಭಾಗಗಳಲ್ಲಿ ಅಲ್ಲಲ್ಲಿ ವಾಯುಭಾರ ಕುಸಿತದ ತುಂತುರು ಮಳೆ ಆರಂಭವಾಗಿ 12 ರಂದು ದಕ್ಷಿಣ ಒಳನಾಡು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ನಂತರ ಕಡಮೆಯಾದರೂ ಡಿ. 16ರಿಂದ ಮತ್ತೆ ವಾಯುಭಾರ ಕುಸಿತದ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಶ್ರೀಲಂಕಾ ಬಳಿಯ ವಾಯುಭಾರ ಕುಸಿತವು ಡಿ. 11 ರಂದು ತಮಿಳುನಾಡು ಕರಾವಳಿಗೆ ತಲಪುವ ನಿರೀಕ್ಷೆ ಇದ್ದು, 12ರಂದು ದಕ್ಷಿಣ ಕೇರಳ ಕಡೆಗೆ ಸಾಗುವ ಸಾಧ್ಯತೆಗಳಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 29-03-2026 | ಕರ್ನಾಟಕದಲ್ಲಿ ಮತ್ತೆ ಮಳೆ…! ನಿಮ್ಮ ಜಿಲ್ಲೆಯಲ್ಲಿ ಮಳೆ ಇದೆಯಾ..?

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…

7 hours ago

ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!

ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…

1 day ago

ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!

ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…

1 day ago

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

2 days ago

ಹವಾಮಾನ ವರದಿ | 27-03-2026 | ಮಾರ್ಚ್ 28 ರಿಂದ ಮಳೆ ಹೆಚ್ಚಳ ಸೂಚನೆ | ರಾಜ್ಯಾದ್ಯಂತ ಗುಡುಗು ಸಹಿತ ಮಳೆಯ ಮುನ್ಸೂಚನೆ

ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…

2 days ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

3 days ago