11.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ತುಂತುರು ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ.
ಈಗಿನಂತೆ ಡಿ. 11ರಂದು ಮಳೆಯ ಸಾಧ್ಯತೆ ಕಡಿಮೆ ಇದ್ದು, 12 ಹಾಗೂ 13ರಂದು ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ವಾಯುಭಾರ ಕುಸಿತದ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ನಂತರ ಬಿಡುವು ಪಡೆದರೂ ಡಿ. 16ರಿಂದ ವಾಯುಭಾರ ಕುಸಿತದ ಮಳೆ ಮುಂದುವರಿಯುವ ಲಕ್ಷಣಗಳಿವೆ.ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಡಿ. 12 ಹಾಗೂ 13ರಂದು ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ವಾಯುಭಾರ ಕುಸಿತದ ಮಳೆಯ ಮುನ್ಸೂಚನೆ ಇದೆ. ನಂತರ ಕಡಿಮೆಯಾಗಲಿದ್ದು, ಡಿ. 16ರಿಂದ ಇನ್ನೊಂದು ವಾಯುಭಾರ ಕುಸಿತದ ಮಳೆ ಮುಂದುವರಿಯುವ ಮುನ್ಸೂಚನೆ ಇದೆ.
ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಅಲ್ಲಲ್ಲಿ ಹಗುರ ಮೋಡದ ಸಾಧ್ಯತೆಯೂ ಇದೆ. ಈಗಿನಂತೆ ಡಿ.11ರಂದು ಕರ್ನಾಟಕ ತಮಿಳುನಾಡು ಗಡಿ ಭಾಗಗಳಲ್ಲಿ ಅಲ್ಲಲ್ಲಿ ವಾಯುಭಾರ ಕುಸಿತದ ತುಂತುರು ಮಳೆ ಆರಂಭವಾಗಿ 12 ರಂದು ದಕ್ಷಿಣ ಒಳನಾಡು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ನಂತರ ಕಡಮೆಯಾದರೂ ಡಿ. 16ರಿಂದ ಮತ್ತೆ ವಾಯುಭಾರ ಕುಸಿತದ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಶ್ರೀಲಂಕಾ ಬಳಿಯ ವಾಯುಭಾರ ಕುಸಿತವು ಡಿ. 11 ರಂದು ತಮಿಳುನಾಡು ಕರಾವಳಿಗೆ ತಲಪುವ ನಿರೀಕ್ಷೆ ಇದ್ದು, 12ರಂದು ದಕ್ಷಿಣ ಕೇರಳ ಕಡೆಗೆ ಸಾಗುವ ಸಾಧ್ಯತೆಗಳಿವೆ.
ಪ್ರಧಾನಮಂತ್ರಿ ಧನ್-ಧಾನ್ಯ ಕೃಷಿ ಯೋಜನೆಯ ಪ್ರಗತಿ ಮೌಲ್ಯಮಾಪನದಲ್ಲಿ ತುಮಕೂರು ಜಿಲ್ಲೆ ಕರ್ನಾಟಕದಲ್ಲಿ ಮೊದಲ…
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿಯ ಸಾವಯವ ಕೃಷಿಕ ಕಲ್ಲಪ್ಪ ಪಂಡಿತಪ್ಪ ನೇಗಿನಾಳ…
ರಾಜ್ಯಾದ್ಯಂತ ನವರಾತ್ರಿ ಸಂಭ್ರಮ ಮನೆಮಾಡಿದ್ದು, ಶೃಂಗೇರಿ, ಹೊರನಾಡು, ಕಟೀಲು ಮತ್ತು ಕೊಲ್ಲೂರು ಸೇರಿದಂತೆ…
ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಧರಣಿಯಲ್ಲಿ ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಯನ್ನು…
ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…
ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…